ನಾಳೆಯೇ ನಟ ದರ್ಶನ್ ಕೂಡ ಬಿಜೆಪಿ ಸೇರಲಿದ್ದಾರೆ. ನಟ ಕಿಚ್ಚ ಸುದೀಪ್ ಸೇರಿದ 1 ಗಂಟೆಯ ಬಳಿಕ ದರ್ಶನ್ ಅವರು ಕಮಲ ಮುಡಿಯಲಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಮಧ್ಯಾಹ್ನ 2.30 ನಿಮಿಷಕ್ಕೆ ಬಿಜೆಪಿ ಕಾರ್ಯಕರ್ತರಾಗಿ ಸದಸ್ಯತ್ವ ಪಡೆಯಲಿದ್ದಾರೆ.
ಇತ್ತೀಚೆಗೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಬಿಜೆಪಿಗೆ ಬಹಿರಂಗ ಬೆಂಬಲ ಘೋಷಿಸಿದ್ದರು.
ನಟ ದರ್ಶನ್ ಸೇರ್ಪಡೆಯಿಂದ ಮಂಡ್ಯ ಭಾಗದಲ್ಲಿ ಪಕ್ಷ ಬಲವರ್ಧನೆಗೆ ಸಹಕಾರಿ ಆಗಬಹುದು ಎನ್ನುವುದು ಬಿಜೆಪಿ ಆಲೋಚನೆ.
ಕೆಲ ದಿನಗಳ ಹಿಂದೆ ದರ್ಶನ್ ಅವರು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದ್ದ ಬಿಜೆಪಿ ಮಹಿಳಾ ಸಮಾವೇಶದಲ್ಲಿ ಭಾಗವಹಿಸಿದ್ದರು.
ಆರ್ ಆರ್ ನಗರ ಉಪ ಚುನಾವಣೆಯಲ್ಲಿ ಸಚಿವ ಮುನಿರತ್ನ ಪರ ಪ್ರಚಾರ ಕೈಗೊಂಡಿದ್ದರು.
ದರ್ಶನ್ ಆಪ್ತ ಸಚ್ಚಿದಾನಂದ ಕೆಲ ತಿಂಗಳ ಹಿಂದೆ ಬಿಜೆಪಿ ಸೇರಿದ್ದರು.
ADVERTISEMENT
ADVERTISEMENT