ನಟ ದಿಗಂತ್ ಹೆಲ್ತ್ ಅಪಡೇಟ್ಸ್ ಬಿಡುಗಡೆ – ವೈದ್ಯರು ಹೇಳಿದ್ದೇನು..?

ಕುಟುಂಬದೊಂದಿಗೆ ಗೋವಾಗೆ ಪ್ರವಾಸಕ್ಕೆ ಹೋಗಿದ್ದ ನಟ ದಿಗಂತ್ ಅಲ್ಲಿ ಸೋಮರ್ ಸಾಲ್ಟ್ ಸಾಹಸ ಪ್ರಯೋಗ ಮಾಡಲು ಹೋಗಿ ಕುತ್ತಿಗೆಗೆ ಗಂಭೀರ ಪೆಟ್ಟು ಮಾಡಿಕೊಂಡಿದ್ದರು. ಅವರನ್ನು ಗೋವಾದಿಂದ ಬೆಂಗಳೂರಿಗೆ ಏರ್ ಲಿಫ್ಟ್ ಮಾಡಿಸಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಈ ಬಗ್ಗೆ ಮಣಿಪಾಲ್ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಮಂಗಳವಾರ ದಿಗಂತ್​ಗೆ 3 ಗಂಟೆಗಳ ಕಾಲ ಆಪರೇಷನ್ ಮಾಡಲಾಗಿದೆ. ಸರ್ಜರಿ ಬಳಿಕ ದಿಗಂತ್​​ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡು ಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ. ವೈದ್ಯರ ತಂಡದಿಂದ ದಿಗಂತ್‌ಗೆ ಚಿಕಿತ್ಸೆ ನೀಡಲಾಗುತ್ತಿದೆ. ದಿಗಂತ್ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಾಣುತ್ತಿದೆ. ಇನ್ನೂ ಮೂರು-ನಾಲ್ಕು ದಿನ ಮಾತ್ರ ಆಸ್ಪತ್ರೆಯಲ್ಲಿ ಉಳಿಯುವ ಸಾಧ್ಯತೆ ಇದೆ ಎಂದು ಮಣಿಪಾಲ್​ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ದಿಗಂತ್​ ಗೆ ಏನೂ ಆಗಲ್ಲ ಎಂದು ಡಾಕ್ಟರ್ ಹೇಳಿದ್ದಾರೆ. ನನ್ನ ಮಗ ಒಂದೆರಡು ದಿನಗಳಲ್ಲಿ ಎದ್ದು ಓಡಾಡ್ತಾನೆ ಅಂತ ಎಂದು ದಿಗಂತ್​ ತಂದೆ ಹೇಳಿದ್ದಾರೆ. ಘಟನೆ‌ ಹೇಗೆ ಆಯ್ತು ಎಂದು ನಾನು ನೋಡಿಲ್ಲ. ಓಡಾಡುವಾಗ ಬೀಳೋದು ಸಹಜ, ಚೆನ್ನಾಗಿ ಮಾತನಾಡ್ತಿದ್ದಾನೆ. ಆಪರೇಷನ್​ಗೆ ಕರೆದುಕೊಂಡು ಹೋಗಿದ್ದಾರೆ. ಮೈನರ್ ಇರೋದ್ರಿಂದ ಈಗಲೇ ಆಪರೇಷನ್ ಮಾಡ್ತೀವಿ ಅಂತ ಕರೆದುಕೊಂಡು ಹೋಗಿದ್ದಾರೆ. ಮುಂದೆ ಸಮಸ್ಯೆ ಆಗಬಾರದು ಅಂತ ಈಗಲೇ ಆಪರೇಷನ್ ಮಾಡ್ತಿದ್ದಾರೆ ಎಂದು ದಿಗಂತ್​ ತಂದೆ ಹೇಳಿದ್ದಾರೆ.

ದಿಗಂತ್​ಗೆ ಯಾವುದೇ ಅಪಾಯವಿಲ್ಲ. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಮುಂದಿನ ಒಂದು ವಾರದೊಳಗೆ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ದಿಗಂತ್ ಹಾಗೂ ಐಂದ್ರಿತಾ ಅವರ ಅಭಿಮಾನಿಗಳು ದಿಗಂತ್ ಶೀಘ್ರವೇ ಗುಣಮುಖರಾಗಲಿ ಎಂದು ಆಶಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here