ಮಲಯಾಳಂ ನಟ ಎನ್.ಡಿ. ಪ್ರಸಾದ್(43) ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೇರಳದ ಕೊಚ್ಚಿಯ ಕಲಾ ಮಸೂರಿಯಲ್ಲಿನ ಅವರ ಮನೆಯಲ್ಲಿ ಶನಿವಾರ ಯಾರೂ ಇಲ್ಲದ ಸಮಯದಲ್ಲಿ ಮನೆಯ ಮುಂದಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಖಳನಾಯಕನ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದ ಅವರು ಕೆಲವು ದಿನಗಳಿಂದ ಖಿನ್ನತೆಗೆ ಒಳಗಾಗಿದ್ದರು. ಪತ್ನಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದು. ಅವರಿಗೆ ಇಬ್ಬರು ಮಕ್ಕಳಿದ್ದಾರೆ.
2016ರಲ್ಲಿ ಬಿಡುಗಡೆಯಾಗಿದ್ದ ‘ಆ್ಯಕ್ಷನ್ ಹಿರೋ ಬಿಜು‘ ಸಿನಿಮಾದಲ್ಲಿ ಅವರು ಖಳನ ಪಾತ್ರದಲ್ಲಿ ನಟಿಸಿದ್ದರು. ಈ ಸಿನಿಮಾ ಅವರಿಗೆ ಖ್ಯಾತಿ ತಂದುಕೊಟ್ಟಿತ್ತು.
ಇವರ ಮೇಲೆ ಡ್ರಗ್ಸ್ ಪ್ರಕರಣ ಸೇರಿದಂತೆ ಹಲವು ಪೊಲೀಸ್ ಪ್ರಕರಣಗಳು ದಾಖಲಾಗಿದ್ದವು ಎಂದು ತಿಳಿದುಬಂದಿದೆ.