ನಟ ದರ್ಶನ್, ದರ್ಶನ್ ಗೆಳತಿ ಪವಿತ್ರಾ ಗೌಡ ಒಳಗೊಂಡಂತೆ 18 ಜನರ ವಿರುದ್ಧ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆಯನ್ನು ನೇರ ಪ್ರಸಾರ ಮಾಡಬೇಕು ಎಂದು ನಟ, ನಿರ್ದೇಶಕ, ನಿರ್ಮಾಪಕ ಉಪೇಂದ್ರ ಒತ್ತಾಯಿಸಿದ್ದಾರೆ.
ಪ್ರಜಾಕೀಯ ಪಕ್ಷದ ಸಂಸ್ಥಾಪಕರು ಆಗಿರುವ ಉಪೇಂದ್ರ ನಟ ದರ್ಶನ್ ಪ್ರಕರಣದ ಬಗ್ಗೆ ಇದೇ ಮೊದಲ ಬಾರಿಗೆ ತಮ್ಮ ಪ್ರತಿಕ್ರಿಯೆ ನೀಡಿದ್ದು, ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ದರ್ಶನ್ – ರೇಣುಕಾ ಸ್ವಾಮಿ – ಪಾರದರ್ಶಕ ವಿಚಾರಣೆ ….. ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ದರ್ಶನ್ ಬಂಧನ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಮತ್ತು ಅದರ ವಿಚಾರಣೆ ಇಡೀ ಕರ್ನಾಟಕ ಮಾತ್ರವಲ್ಲ ಇಡೀ ಭಾರತವೇ ಭೆರಗಾಗಿ ನೋಡುತ್ತಿದೆ. ಈ ಹೈ ಪ್ರೊಫೈಲ್ ಕೇಸ್ ನ ವಿಚಾರಣೆಯಲ್ಲಿ ನಿಶ್ಪಕ್ಷಪಾತವಾದ ನಿರ್ಣಯ ಮತ್ತು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ. ರೇಣುಕಾ ಸ್ವಾಮಿ ಕುಟುಂಬದಲ್ಲಿ, ಜನರಲ್ಲಿ, ಟೀವಿ ಮಾಧ್ಯಮಗಳಲ್ಲಿ ಮತ್ತು ದರ್ಶನ್ ಅಭಿಮಾನಿಗಳಲ್ಲಿ ಏನೇನೋ ಆತಂಕ, ಅನುಮಾನಗಳು ಕಾಡುತ್ತಿದೆ, ಊಹಾಪೋಹಗಳು ಹುಟ್ಟಿಕೊಳ್ಳುತ್ತಿದೆ. ಏಕೆಂದರೆ…… ಯಾವುದೇ ಕೇಸ್ ಆದರೂ ಆ ಕೇಸ್ ನ ವಿಚಾರಣೆಯ ವೀಡಿಯೋ ಧಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಆಗಾಗ ಪೋಲೀಸರು ಸಂಬಂದ ಪಟ್ಟ ವ್ಯಕ್ತಿಗಳ ಕುಟುಂಬದವರ ಜೊತೆ ಹಂಚಿಕೊಳ್ಳಬೇಕು ಮತ್ತು ಅದು ಕಾನೂನಾಗಬೇಕು. ( ಹಿಂದೆಲ್ಲಾ ಪೊಲೀಸರು ವಿಚಾರಣೆಯ ವಿವರ ಬರೆದು ದಾಖಲಿಸುತ್ತಿದ್ದರು ಈಗ ತಂತ್ರಜ್ಞಾನ ಇಷ್ಟೊಂದು ಮುಂದುವರೆದಿದ್ದು ಎಲ್ಲವನ್ನೂ ವೀಡಿಯೋ ರೆಕಾರ್ಡ್ ಮತ್ತು ಲೈವ್ ಸ್ಟ್ರೀಮಿಂಗ್ ಮಾಡಬಹುದು )( ಕಾನೂನು ಸುಧಾರಣೆಗಳು #CriminalJustice Reforms ) ಅದೇ ರೀತಿ ಒಬ್ಬ ಸಾರ್ವಜನಿಕ ವ್ಯಕ್ತಿಯ ಬಗ್ಗೆ ಕೇಸ್ ಆಗಿದ್ದರೆ ಆ ಕೇಸ್ ನ ವಿಚಾರಣೆಯ ವೀಡಿಯೋ ಧಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಪೋಲೀಸರು ಆಗಾಗ ಸಾರ್ವಜನಿಕವಾಗಿ ತೆರೆದಿಡಬೇಕು ಒಬ್ಬ ಸಾರ್ವಜನಿಕ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗೇ ಸಂಪೂರ್ಣ ಪಾರದರ್ಶಕತೆಯಿಂದ ಆಗಬೇಕು, ಸಾಕ್ಷಿ ನಾಶ, ಪ್ರಭಾವಿಗಳ ಹಸ್ತಕ್ಷೇಪ, ಭ್ರಷ್ಟಾಚಾರ ಇವಕ್ಕೆಲ್ಲಾ ತೆರೆ ಎಳೆದಂತಾಗುತ್ತದೆ. ಆಗ ರೇಣುಕಾ ಸ್ವಾಮಿ ಕುಟುಂಬಕ್ಕೆ, ಜನರಿಗೆ, ಟೀವಿ ಮಾಧ್ಯಮಗಳಿಗೆ ಮತ್ತು ದರ್ಶನ್ ಅಭಿಮಾನಿಗಳಿಗೆ ಮನಸಿನಲ್ಲಿ ಗೊಂದಲಗಳಿಲ್ಲದೆೇ ಪೋಲೀಸ್ ಮತ್ತು ಟೀವಿ ಮಾಧ್ಯಮಗಳ ಬಗ್ಗೆ ಇನ್ನೂ ಗೌರವ ಹೆಚ್ಚಾಗುತ್ತದೆ ಮತ್ತು ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಬರುತ್ತದೆ.
ಎಂದು ಉಪೇಂದ್ರ ಆಗ್ರಹಿಸಿದ್ದಾರೆ.
ADVERTISEMENT
ADVERTISEMENT