ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರು ಹೃದಯಾಘಾತದಿಂಧ ನಿಧನರಾಗಿದ್ದಾರೆ.
ತಮ್ಮ ಸ್ನೇಹಿತೆಯರ ಜೊತೆಗೆ ಮಲೇಷ್ಯಾಕ್ಕೆ ತೆರಳಿದ್ದಾಗ ಅಲ್ಲಿಯೇ ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ.
ದಂಪತಿಗೆ ಇವರಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ.
2016ರಲ್ಲಿ ಬಿಡುಗಡೆಯಾದ ಅಪೂರ್ವ ಸಿನೆಮಾದಲ್ಲಿ ಅತಿಥಿ ಪಾತ್ರದಲ್ಲಿ ಸ್ಪಂದನಾ ನಟಿಸಿದ್ದರು.
ಪೊಲೀಸ್ ಅಧಿಕಾರಿ ಶಿವರಾಂ ಅವರ ಪುತ್ರಿಯಾಗಿರುವ ಸ್ಪಂದನಾ ಅವರನ್ನು ವಿಜಯ ರಾಘವೇಂದ್ರ 2007 , ಆಗಸ್ಟ್ 26 ರಲ್ಲಿ ಪ್ರೀತಿಸಿ ಮದುವೆಯಾಗಿದ್ದರು.
16ನೇ ವಿವಾಹ ವಾರ್ಷಿಕೋತ್ಸವಕ್ಕೆ ಕೇವಲ 19 ದಿನಗಳು ಬಾಕಿ ಇರುವಂತೆ ಈ ದುರಂತ ನಡೆದಿದೆ.
ADVERTISEMENT
ADVERTISEMENT