ಚಂದನವನದ ಗೊಂಬೆ ನಟಿ ರಮ್ಯಾ ಅವರು ಪೊಲೀಸ್ ಠಾಣೆಯ ಮೆಟ್ಟಿಲು ಹತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ನಿಂದನೆ ಮಾಡಿದ ಕಾರಣಕ್ಕೆ ಆ ವ್ಯಕ್ತಿಯ ವಿರುದ್ಧ ದೂರು ದಾಖಲಿಸಿದ್ದಾರೆ.
ರಾಜಕಾರಣದಿಂದ ದಌಊರು ಸರಿದಿರುವ ನಟಿ ರಮ್ಯಾ ಇತ್ತೀಚೆಗೆ ಕೆನ್ನಡ ಸಿನೆಮಾದ ಕೆಲವು ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ. ಅಲ್ಲದೇ, ಸಾಮಾಜಿಕ ಜಾಲತಾಣಗಳ ಮೂಲಕ ಚಿತ್ರರಂಗದ ವಿಷಯಗಳ ಬಗ್ಗೆ ಚರ್ಚಿಸುತ್ತಾ ಹೆಚ್ಚು ಸಕ್ರಿಯರಾಗಿರುತ್ತಾರೆ. ಇತ್ತೀಚೆಗೆ ಕಾಂಗ್ರೆಸ್ನಲ್ಲಿನ ಅಸ್ತವ್ಯಸ್ತತೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನೇರವಾಗಿ ಆಕ್ಷೇಪ ವ್ಯಕ್ತಪಡಿಸಿ ಸುದ್ದಿಯಲ್ಲಿದ್ದರು.
ಇದೀಗ, ನಟಿ ರಮ್ಯಾ ಅವರಿಗೆ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂನಲ್ಲಿ ವ್ಯಕ್ತಿಯೊಬ್ಬ ನಿಂದನೆ ಮಾಡಿದ್ದಾನಂತೆ. ಆದ್ದರಿಂದ, ಇಂದು ಹಲಸೂರು ಗೇಟ್ ಪೊಲೀಸ್ ಠಾಣೆಗೆ ಬಂದಿದ್ದ ನಟಿ ರಮ್ಯಾ ಕೇಂದ್ರ ವಿಭಾಗದ ಸಿಇಎನ್ ಠಾಣೆಯಲ್ಲಿ ಆ ವ್ಯಕ್ತಿ ವಿರುದ್ಧ ದೂರು ದಾಖಲಿಸಿದ್ದಾರೆ.
ತಮಗೆ ಇನ್ಸ್ಟಾಗ್ರಾಮ್ ನಲ್ಲಿ ವ್ಯಕ್ತಿಯೊಬ್ಬ ನಿಂದನೆ ಮಾಡಿದ್ದು, ಅವನ ವಿರುದ್ಧ ಸೂಕ್ತ ಕ್ರಮ ತಗೆದುಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ. ದೂರು ಸ್ವೀಕರಿಸಿರುವ ಸಿಇಎನ್ ಠಾಣಾಧಿಕಾರಿಗಳು ಸೂಕ್ತ ಕ್ರಮ ಜರುಗಿಸುವುದಾಗಿ ತಿಳಿಸಿದ್ದಾರಂತೆ.