ತೆಲುಗು ನಟಿ ಜಯಸುಧಾ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ದೆಹಲಿಯಲ್ಲಿ ತೆಲಂಗಾಣ ಬಿಜೆಪಿ ಅಧ್ಯಕ್ಷರೂ ಆಗಿರುವ ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
2009ರಲ್ಲಿ ಜಯಸುಧಾ ಅವರು ಸಿಕಂದರಬಾದ್ ಕ್ಷೇತ್ರದಿಂದ ಕಾಂಗ್ರೆಸ್ನಿಂದ ಸ್ಪರ್ಧಿಸಿ ಗೆದ್ದು ಶಾಸಕಿಯಾಗಿ ಆಯ್ಕೆಯಾಗಿದ್ದರು.
ಆ ಬಳಿಕ ಕಾಂಗ್ರೆಸ್ ಬಿಟ್ಟು 2016ರಲ್ಲಿ ತೆಲುಗು ದೇಶಂ ಪಕ್ಷಕ್ಕೆ ಸೇರ್ಪಡೆಯಾದರು. 2019ರಲ್ಲಿ ಟಿಡಿಪಿಗೆ ರಾಜೀನಾಮೆ ಕೊಟ್ಟು ಆಂಧ್ರ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ ಅವರ ವೈಎಸ್ಆರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು.
ಈಗ ವೈಎಸ್ಆರ್ ಕಾಂಗ್ರೆಸ್ಗೆ ರಾಜೀನಾಮೆ ನೀಡಿ ಇವತ್ತು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ADVERTISEMENT
ADVERTISEMENT