ದೇಶದ ಅತೀ ದೊಡ್ಡ ಸರ್ಕಾರಿ ಸ್ವಾಮ್ಯದ ವಿದ್ಯುತ್ ಉತ್ಪಾದನಾ ಕಂಪನಿ ಎನ್ಟಿಪಿಸಿ ವಿದೇಶದಿಂದ ಕಲ್ಲಿದ್ದಲು ಆಮದು ಮಾಡಿಕೊಳ್ಳುವ ಬರೋಬ್ಬರೀ 6,585 ಕೋಟಿ ರೂಪಾಯಿ ಮೊತ್ತದ ಗುತ್ತಿಗೆಯನ್ನು ಗುಜರಾತ್ ಮೂಲದ ಕಂಪನಿ ಗೌತಮ್ ಅದಾನಿ ಮಾಲೀಕತ್ವದ ಅದಾನಿ ಎಂಟರ್ ಪ್ರೆöÊಸಸ್ಗೆ ನೀಡಿದೆ.
ದೇಶದಲ್ಲಿರುವ ಕಲ್ಲಿದ್ದಲು ಗಣಿಗಳಲ್ಲಿ ಕಲ್ಲಿದ್ದಲು ಹೊರತೆಗೆಯುವಿಕೆ ಪ್ರಮಾಣ ಕುಸಿದಿರುವ ಹಿನ್ನೆಲೆಯಲ್ಲಿ ಉಷ್ಣ ವಿದ್ಯುತ್ ಉತ್ಪಾದನೆ ವೇಳೆ ಶೇಕಡಾ 10ರಷ್ಟು ಪ್ರಮಾಣದಲ್ಲಿ ವಿದೇಶದಿಂದ ಆಮದು ಮಾಡಿಕೊಳ್ಳಲಾಗುವ ಕಲ್ಲಿದ್ದಲ್ಲನ್ನು ಕಡ್ಡಾಯವಾಗಿ ಬಳಸಬೇಕೆಂದು ಕೆಲ ದಿನಗಳ ಹಿಂದೆಯಷ್ಟೇ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ವಿದ್ಯುತ್ ಉತ್ಪಾದನಾ ಕಂಪನಿಗಳಿಗೆ ಸೂಚಿಸಿತ್ತು.
ಈ ಹಿನ್ನೆಲೆಯಲ್ಲಿ ರಾಷ್ಟಿçÃಯ ಉಷ್ಣವಿದ್ಯುತ್ ನಿಗಮ (ಎನ್ಟಿಪಿಸಿ) ಆಮದು ಕಲ್ಲಿದ್ದಲು ಸರಬರಾಜಿಗಾಗಿ ಟೆಂಡರ್ ಕರೆದಿತ್ತು. ಈ ಟೆಂಡರ್ ಅದಾನಿ ಕಂಪನಿಯ ಪಾಲಾಗಿದೆ.