ನಾಳೆಯಿಂದ ಏರೋ ಇಂಡಿಯಾ ಪ್ರದರ್ಶನ – ಬೆಂಗಳೂರು ಸಂಚಾರಿ ಪೊಲೀಸರಿಂದ ಕೆಲ ನಿರ್ಬಂಧ

Representative Image
ನಾಳೆಯಿಂದ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯಾ ಪ್ರದರ್ಶನ ನಡೆಯಲಿದೆ. ನಾಳೆ ಏರೋ ಇಂಡಿಯಾ ಶೋ ಉದ್ಘಾಟನೆಗಾಗಿ ಇವತ್ತು ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಬರುತ್ತಿದ್ದಾರೆ.
ನಾಳೆ ವೈಮಾನಿಕ ಪ್ರದರ್ಶನ ಉದ್ಘಾಟನೆ ಹಿನ್ನೆಲೆಯಲ್ಲಿ ಬೆಳಗ್ಗೆ 8 ಗಂಟೆಯಿಂದ ಬೆಳಗ್ಗೆ 11 ಗಂಟೆಯವರೆಗೆ ಹೆಬ್ಬಾಳದ ಎಸ್ಟೀಮ್​ ಮಾಲ್​ನಿಂದ ಏರ್​ಪೋರ್ಟ್​​ ರಸ್ತೆ ಎಲಿವೇಟೆಡ್​ ಫ್ಲೈಓವರ್​ ಮೇಲೆ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.
ಇದಲ್ಲದೇ ಫೆಬ್ರವರಿ 17ರವರೆಗೆ ಅಂದರೆ ವೈಮಾನಿಕ ಪ್ರದರ್ಶನದ ಕೊನೆಯ ದಿನದವರೆಗೂ ಬೆಂಗಳೂರು ಸಂಚಾರಿ ಪೊಲೀಸರು ಈ ಕೆಳಕಂಡ ಕಡೆಗಳಲ್ಲಿ ಪರ್ಯಾಯ ಮಾರ್ಗವನ್ನು ಬಳಸುವಂತೆ ಸೂಚಿಸಿದ್ದಾರೆ.

 

LEAVE A REPLY

Please enter your comment!
Please enter your name here