ಪಿಎಫ್​​ಐ ಮೇಲೆ ಎನ್​ಐಎ ದಾಳಿ ಬೆನ್ನಲ್ಲೇ, ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್

Petrol Bomb

ಬಿಜೆಪಿ ಕಚೇರಿ ಮೇಲೆ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ (Petrol Bomb) ಎಸೆದ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ಗುರುವಾರ ರಾತ್ರಿ ನಡೆದಿದೆ.

ಕೊಯಮತ್ತೂರಿನ ವಿಕೆಕೆ ಮೆನನ್ ರಸ್ತೆಯಲ್ಲಿರುವ ಬಿಜೆಪಿ ಕಚೇರಿಯಲ್ಲಿ ಈ ಘಟನೆ ನಡೆದಿದೆ. ಪೆಟ್ರೋಲ್ ಬಾಂಬ್ ಎಸೆಯುವ ಮೊದಲು ಬಿಜೆಪಿ ಕಚೇರಿ ಬಳಿ ಕೆಲವರು ಅನುಮಾನಸ್ಪದವಾಗಿ ಚಲಿಸಿರುವುದು ಕಂಡುಬಂದಿದೆ. ಘಟನೆಯಲ್ಲಿ ಯಾವುದೇ ಹಾನಿ ಅಥವಾ ಯಾರಿಗೂ ತೊಂದರೆಯೂ ಆಗಲಿಲ್ಲ ಎಂದು ವರದಿಯಾಗಿದೆ.

ಈ ರೀತಿ ಘಟನೆಯು ಬಿಜೆಪಿ ಕಾರ್ಯಕರ್ತರನ್ನು ತಡೆಯುವುದಿಲ್ಲ ಎಂದು ತಮಿಳುನಾಡಿನ ಬಿಜೆಪಿ ಮುಖ್ಯಸ್ಥ ಕೆ. ಅಣ್ಣಾಮಲೈ ಟ್ವೀಟ್ ಮಾಡಿದ್ದಾರೆ.

ಗುರುವಾರ ದೇಶಾದ್ಯಂತ ಹಲವು ಭಾಗಗಳಲ್ಲಿ ಪಿಎಫ್‍ಐ ಕಚೇರಿಗಳು ಹಾಗೂ ಅದರ ಪದಾಧಿಕಾರಿಗಳ ನಿವಾಸಗಳ ಮೇಲೆ ಎನ್‍ಐಎ ದಾಳಿ ನಡೆಸಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ (Petrol Bomb) ಎಸೆಯಲಾಗಿದೆ ಎಂದು ಶಂಕಿಸಲಾಗಿದೆ.

ಘಟನೆಗೆ ಸಂಬಂಧಿಸಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಪೆಟ್ರೋಲ್ ತುಂಬಿದ ಬಾಟಲಿಯು ಪಕ್ಷದ ಕಚೇರಿಯ ಕೆಳಗೆ ಬಿದ್ದಿರುವುದು ಕಂಡುಬಂದಿದೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ : ಬಿಜೆಪಿ ಭ್ರಷ್ಟಾಚಾರ: PAYCM ಪೋಸ್ಟರ್​ ಸಂಬಂಧ ಮೂವರ ಬಂಧನ

LEAVE A REPLY

Please enter your comment!
Please enter your name here