ರೈತರಿಗೆ ನೀಡಲಾಗುವ ಶೂನ್ಯ ಬಡ್ಡಿ ಸಾಲದ ಪ್ರಮಾಣದ ಮಿತಿಯನ್ನು 5 ಲಕ್ಷ ರೂಪಾಯಿವರೆಗೆ ಹೆಚ್ಚಿಸಲಾಗಿದೆ.
ಶೇ. 3ರ ಬಡ್ಡಿ ದರದಲ್ಲಿ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಮಿತಿ 10 ಲಕ್ಷ ರೂ. ಗಳಿಂದ 15 ಲಕ್ಷ ರೂ. ಗಳಿಗೆ ಹೆಚ್ಚಳ ಮಾಡಲಾಗಿದೆ.
30 ಲಕ್ಷಕ್ಕೂ ಹೆಚ್ಚು ರೈತರಿಗೆ 25,000 ಕೋಟಿ ರೂ. ಸಾಲ ವಿತರಣೆ ಗುರಿ ಹೊಂದಲಾಗಿದೆ.
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳ ರೈತರಿಗೆ ಸರಕು ಸಾಗಾಣಿಕೆಗೆ ಪಿಕ್ಅಪ್ ವ್ಯಾನ್ ಖರೀದಿಗೆ ಶೇ.4 ರ ಬಡ್ಡಿ ದರದಲ್ಲಿ 7 ಲಕ್ಷ ರೂ. ವರೆಗಿನ ಸಾಲ ಸೌಲಭ್ಯ ಸ್ಥಾಪಿಸಲಾಗುತ್ತದೆ.
ರಾಜ್ಯದ ಆಯ್ದ 50 ತರಕಾರಿ ಮಾರುಕಟ್ಟೆಗಳಲ್ಲಿ ಮಿನಿ ಶೀತಲಗೃಹಗಳ ಸ್ಥಾಪನೆಯನ್ನು ಸಿಎಂ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ.
ADVERTISEMENT
ADVERTISEMENT