ADVERTISEMENT
ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಮತ್ತು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಕುಟುಕಿದ್ದಾರೆ.
ಇಂತಹ ನಕಲಿ ಪತ್ರವನ್ನಿಟ್ಟುಕೊಂಡು ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ನೀವೇ ಇದರ ಸೃಷ್ಟಿಕರ್ತರೋ? ಅಥವಾ ನಿಮ್ಮ “ಬ್ರದರ್ರೋ”?
ಎಂದು ಬಿಜೆಪಿ ಮತ್ತು ಕುಮಾರಸ್ವಾಮಿ ಅವರಿಗೆ ಪ್ರಶ್ನಿಸಿದ್ದಾರೆ.
ಮಂಡ್ಯ ಜಿಲ್ಲೆಯ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎಂಬರ್ಥದಲ್ಲಿ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪತ್ರ ನಕಲಿಯಾದುದು ಎಂದು ಬಯಲಾಗಿದೆ. ಅಂತಹ ಅಧಿಕಾರಿಗಳು ಯಾರು ಜಿಲ್ಲೆಯಲ್ಲಿ ಇಲ್ಲ ಎಂದು ಮಂಡ್ಯದ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ. ಹೀಗಿದ್ದರೂ ಈ ಸಂಬಂಧ ಪರಿಶೀಲನೆ ನಡೆಸಿ, ಅಗತ್ಯ ಕಂಡುಬಂದಲ್ಲಿ ತನಿಖೆ ನಡೆಸುತ್ತೇವೆ.
@bjp4karnatakaದ ನಾಯಕರೇ ಇಂತಹ ನಕಲಿ ಪತ್ರವನ್ನಿಟ್ಟುಕೊಂಡು ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ನೀವೇ ಇದರ ಸೃಷ್ಟಿಕರ್ತರೋ? ಅಥವಾ ನಿಮ್ಮ “ಬ್ರದರ್ರೋ”?
ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕುಟುಕಿದ್ದಾರೆ.
ADVERTISEMENT