ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ರಾಜ್ಯ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಮಂಡ್ಯದ ಮಹಿಳಾ ಕಾಲೇಜು ಹಾಗೂ ವೈದ್ಯಕೀಯ ಕಾಲೇಜಿನಲ್ಲಿ ಚುನಾವಣಾ ಪ್ರಚಾರ ನಡೆಸಿದ್ದರು.
ಈ ಬಗ್ಗೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುಂಡಹಳ್ಳಿ ಮಂಜುನಾಥ್ ಅವರು ಸಚಿವ ಅಶ್ವತ್ಥ್ ನಾರಾಯಣ್ ವಿರುದ್ಧ ದೂರು ನೀಡಿದ್ದರು.
ಖಾಸಗಿ ಮೊಕದ್ದಮೆ ತನಿಖೆ ನಡೆಸಿದ ಕೋರ್ಟ್ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಸೂಚಿಸಿತ್ತು. ಕೋರ್ಟ್ ಆದೇಶದಂತೆ ಪೂರ್ವ ಠಾಣೆ ಅಪರಾಧ ವಿಭಾಗದ ಪಿಎಸ್ಐ ಕೆ.ಎನ್.ಕೇಶವಮೂರ್ತಿ ಎಫ್ಐಆರ್ ದಾಖಲಿಸಿದ್ದಾರೆ.
ಈ ಪ್ರಕರಣದಲ್ಲಿ ಎ1 ಸಚಿವ ಅಶ್ವತ್ಥ್ ನಾರಾಯಣ್ ಹಾಗೂ ಎ2 ಬಿಜೆಪಿ ಮೈ.ವಿ.ರವಿಶಂಕರ್ ವಿರುದ್ಧ ಪ್ರಜಾಪ್ರತಿನಿಧಿ ಕಾಯ್ದೆಯಡಿ ಎಫ್ಐಆರ್ ದಾಖಲಾಗಿದೆ.