ADVERTISEMENT
ತೆಲುಗು ನಟ ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿದೆ.
ಹೈದ್ರಾಬಾದ್ ನಗರದ ಚಿಕ್ಕಡಪಲ್ಲಿ ಪೊಲೀಸ್ ಠಾಣೆಯ ಪೊಲೀಸರು ಅಲ್ಲು ಅರ್ಜುನ್ ಅವರನ್ನು ಬಂಧಿಸಿದ್ದಾರೆ.
ಡಿಸೆಂಬರ್ 4ರಂದು ಸಂಧ್ಯಾ ಥಿಯೇಟರ್ನಲ್ಲಿ ಪುಷ್ಪ -2 ಸಿನಿಮಾದ ಪ್ರಿಮಿಯರ್ ಶೋ ನಡೆದಿತ್ತು. ಆ ಪ್ರಿಮಿಯರ್ ಶೋಗೆ ನಟ ಅಲ್ಲು ಅರ್ಜುನ್ ಹೋಗಿದ್ದರು. ಈ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 39 ವರ್ಷದ ಮಹಿಳೆ ಸಾವನ್ನಪ್ಪಿದ್ದರು. ಆಕೆಯ ಮಗ ಗಂಭೀರವಾಗಿ ಗಾಯಗೊಂಡಿದ್ದರು.
ಪ್ರೀಮಿಯರ್ ಶೋಗೆ ಆ ಥಿಯೇಟರ್ಗೆ ಬರುವ ಬಗ್ಗೆ ಅಲ್ಲು ಅರ್ಜುನ್ ಅವರ ತಂಡವಾಗಲೀ ಅಥವಾ ಥಿಯೇಟರ್ನವರಾಗಲೀ ಪೊಲೀಸರಿಗೆ ಮೊದಲೇ ಮಾಹಿತಿ ನೀಡಿರಲಿಲ್ಲ.
ಈ ಹಿನ್ನೆಲೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಕಲಂ 105 (ನರಹತ್ಯೆಗೆ ಯತ್ನ), 118(1) (ಸ್ವಯಂಪ್ರೇರಿತವಾಗಿ ಗಂಭೀರ ಹಾನಿಯನ್ನುಂಟು ಮಾಡುವುದು) ಸಂಬಂಧ ಅಲ್ಲು ಅರ್ಜುನ್, ಅವರ ಭದ್ರತಾ ಸಿಬ್ಬಂದಿ ಮತ್ತು ಥಿಯೇಟರ್ ಮಾಲೀಕರ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
ನಟ ಅಲ್ಲು ಅರ್ಜುನ್ ಅವರನ್ನು ಇವತ್ತು ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತದೆ. ಈಗಾಗಲೇ ಅಲ್ಲು ಅರ್ಜುನ್ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ADVERTISEMENT