ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತದಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕರು (ಕಾರ್ಯಾಚರಣೆ), ಹಿರಿಯ ಸಹಾಯಕರು, ಕಿರಿಯ ಸಹಾಯಕರು ಮತ್ತು ಬೀಜ ಸಹಾಯಕರು ಹುದ್ದೆಗಳ ನೇರ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ.
ಹುದ್ದೆಗಳ ಹೆಸರು: ಸಹಾಯಕ ವ್ಯವಸ್ಥಾಪಕರು (ಕಾರ್ಯಾಚರಣೆ), ಹಿರಿಯ ಸಹಾಯಕರು, ಕಿರಿಯ ಸಹಾಯಕರು ಮತ್ತು ಬೀಜ ಸಹಾಯಕರು
ಹುದ್ದೆಗಳ ಸಂಖ್ಯೆ :
ಸಹಾಯಕ ವ್ಯವಸ್ಥಾಪಕರು (ಕಾರ್ಯಾಚರಣೆ): 16
ಹಿರಿಯ ಸಹಾಯಕರು: 1
ಕಿರಿಯ ಸಹಾಯಕರು: 9
ಬೀಜ ಸಹಾಯಕರು: 6
ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 22-06-2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 20-07-2022
ಶುಲ್ಕ ಪಾವತಿಗೆ ಕೊನೆ ದಿನಾಂಕ : 25-07-2022
ಅರ್ಜಿ ಶುಲ್ಕ :
ಸಾಮಾನ್ಯ ಅಭ್ಯರ್ಥಿಗಳಿಗೆ : ರೂ.750.
ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ : ರೂ.500.
ಮಾಜಿ ಸೈನಿಕ ಅಭ್ಯರ್ಥಿಗಳು, ಎಸ್ಸಿ / ಎಸ್ಟಿ / ಪ್ರವರ್ಗ-1 / ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ, ಪ್ರಕ್ರಿಯೆ ಶುಲ್ಕ ರೂ.250.
ಶೈಕ್ಷಣಿಕ ವಿದ್ಯಾರ್ಹತೆ :
ಸಹಾಯಕ ವ್ಯವಸ್ಥಾಪಕರು (ಕಾರ್ಯಾಚರಣೆ): ಬಿಎಸ್ಸಿ ಇನ್ ಕೃಷಿ ಪದವಿ ಪಡೆದಿರಬೇಕು.
ಹಿರಿಯ ಸಹಾಯಕರು: ಬಿಕಾಂ/ಬಿಬಿಎಂ ಪದವಿ ಜತೆಗೆ, ಟ್ಯಾಲಿ ಸರ್ಟಿಫಿಕೇಟ್ ಪಡೆದಿರಬೇಕು.
ಕಿರಿಯ ಸಹಾಯಕರು: ಬಿಕಾಂ/ಬಿಬಿಎಂ ಪದವಿ ಜತೆಗೆ, ಟ್ಯಾಲಿ ಸರ್ಟಿಫಿಕೇಟ್ ಪಡೆದಿರಬೇಕು.
ಬೀಜ ಸಹಾಯಕರು: ಕೃಷಿಯಲ್ಲಿ 2 ವರ್ಷದ ಡಿಪ್ಲೊಮ ಪಾಸ್ ಮಾಡಿರಬೇಕು.
ವೇತನ ಶ್ರೇಣಿ :
ಸಹಾಯಕ ವ್ಯವಸ್ಥಾಪಕರು (ಕಾರ್ಯಾಚರಣೆ): ರೂ.40900-78200.
ಹಿರಿಯ ಸಹಾಯಕರು : ರೂ.27650-52650.
ಕಿರಿಯ ಸಹಾಯಕರು : ರೂ.21400-42000.
ಬೀಜ ಸಹಾಯಕರು : ರೂ.21400-42000.
ವಯೋಮಿತಿ :
ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ ವಯೋಮಿತಿ ಅರ್ಹತೆ ವರ್ಗಾವಾರು ಕೆಳಗಿನಂತಿದೆ.
ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷ.
ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ.
ಎಸ್ಸಿ / ಎಸ್ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ.
ಅಪ್ಲಿಕೇಶನ್ ಸಲ್ಲಿಕೆ ಹೇಗೆ?
ಅರ್ಜಿಯನ್ನು ಆನ್ಲೈನ್ ಮೂಲಕವೇ ಸಲ್ಲಿಸಬೇಕು. 4 ಹಂತಗಳಲ್ಲಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ನಡೆಯಲಿದೆ. ಅರ್ಜಿ ಸಲ್ಲಿಸಲು https://cetonline.karnataka.gov.in/kea/ksscl ಈ ಲಿಂಕ್ ಕ್ಲಿಕ್ ಮಾಡಿ.