ಶಿಮೊಗ್ಗ ಜಿಲ್ಲೆ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮೈಬಣ್ಣದ ಬಗ್ಗೆ ಅವಹೇಳನ ಮಾಡಿದ್ದಲ್ಲದೇ ಕಲ್ಯಾಣ ಕರ್ನಾಟಕ ಭಾಗದ ಜನರ ಬಗ್ಗೆಯೂ ನಿಂದಿಸಿದ್ದಾರೆ.
ಅರಣ್ಯವೇ ಇಲ್ಲದ ಪ್ರದೇಶದವರು ಅರಣ್ಯ ಸಚಿವರಾಗಿರುವುದು ನಮ್ಮ ದುರದೃಷ್ಟ. ಬೀದರ್ ಮೂಲದ ಅವರಿಗೆ (ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರಿಗೆ) ಮರ-ಗಿಡ ಎಂದರೆ ಏನು, ಅದರ ನೆರಳು ಎಂದರೆ ಏನು ಎಂಬುದೇ ಗೊತ್ತಿಲ್ಲ. ಅವರಿಗೆ ಮಲೆನಾಡಿನವರ ಬದುಕು, ಪಶ್ಚಿಮ ಘಟ್ಟದವರ ಸಮಸ್ಯೆಗಳ ಬಗ್ಗೆ ಗೊತ್ತಿಲ್ಲ.
ಆ ಭಾಗದವರು ಸುಟ್ಟು ಕರಕಲಾಗಿರುತ್ತಾರೆ. ಖರ್ಗೆ ಅವರನ್ನು ನೋಡಿದರೇ ಅಲ್ಲಿನವರ ಸ್ಥಿತಿ ಗೊತ್ತಾಗುತ್ತದೆ. ಪಾಪ ಅವರ (ಖಂಡ್ರೆ) ಅವರ ತಲೆಕೂದಲು ಮುಚ್ಚಿಕೊಂಡಿದ್ದರಿಂದ ಉಳಿದುಕೊಂಡಿದ್ದಾರೆ. ಅದೇ ಅವರ ನೆರಳು
ಎಂದು ಪಶ್ಚಿಮಘಟ್ಟ ಸಂರಕ್ಷಣೆ ಸಂಬಂಧ ಕಸ್ತೂರಿ ರಂಗನ್ ವರದಿ ವಿರೋಧಿಸಿ ತೀರ್ಥಹಳ್ಳಿಯಲ್ಲಿ ನಡೆದ ಬಿಜೆಪಿ ಪ್ರತಿಭಟನೆಯಲ್ಲಿ ಆರಗ ಜ್ಞಾನೇಂದ್ರ ಅವಹೇಳನ ಮಾಡಿದ್ದಾರೆ.
ADVERTISEMENT
ADVERTISEMENT