ಜೈಲಿನಲ್ಲಿ ಕೈದಿಗಳಿಂದ ಜೀತ ಮಾಡಿಸಿಕೊಳ್ಳುವ ಹಕ್ಕು ಸರ್ಕಾರಕ್ಕೆ ಇಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಕೈದಿಗಳ ದಿನಗೂಲಿಯನ್ನು ದಿನಕ್ಕೆ 200 ರೂಪಾಯಿಗಳಂತೆ ತಿಂಗಳಕ್ಕೆ 6 ಸಾವಿರ ರೂಪಾಯಿ ಹೆಚ್ಚಿಸುವ ಬಗ್ಗೆ ಪ್ರಸ್ತಾವನೆ ಇಡಲಾಗಿದೆಯೇ ಹೊರತು ಆದೇಶ ಹೊರಡಿಸಿಲ್ಲ ಎಂದು ಸಚಿವರು ಹೇಳಿದ್ದಾರೆ.
ರಾಜ್ಯದ ಕಾರಾಗೃಹಗಳಲ್ಲಿ ಸುಮಾರು 15 ಸಾವಿರ ಕೈದಿಗಳಿದ್ದಾರೆ. ಕೈದಿಗಳಿಗೆ ಕೂಲಿ ಮೊತ್ತವನ್ನು 200 ರೂ. ನಿಂದ ಸ್ವಲ್ಪ ಹೆಚ್ಚಳ ಮಾಡುವ ಕುರಿತು ಪ್ರಸ್ತಾವನೆ ಮಾಡಲಾಗಿದೆಯೇ ಹೊರತು, ಈವರೆಗೆ ಆದೇಶ ಹೊರಡಿಸಿಲ್ಲ.
ಜೈಲಿನಲ್ಲಿ ಪ್ರತಿ ಕೈದಿಯೂ ಕೆಲಸ ಮಾಡಬೇಕಾಗುತ್ತದೆ. ವಿವಿಧ ಕೆಲಸಗಳ ಮೂಲಕ ಕೈದಿಗಳ ಖಿನ್ನತೆ ಹೋಗಲಾಡಿಸಿ ಅವರ ಮನಃಪರಿವರ್ತನೆ ಮಾಡುವುದು ಇದರ ಉದ್ದೇಶ. ಈ ಮೂಲಕ ಇಲಾಖೆಗೆ ಆದಾಯವೂ ಬರುತ್ತಿದೆ. ಕೈದಿಯಾದ ಮಾತ್ರಕ್ಕೆ ಅವರಿಂದ ಜೀತ ಮಾಡಿಸಿಕೊಳ್ಳುವ ಹಕ್ಕು ಯಾವ ಸರ್ಕಾರಕ್ಕೂ ಇಲ್ಲ.
ಈ ಕಾರಣಕ್ಕಾಗಿ ಅವರಿಂದಲೇ ಬರುತ್ತಿರುವ ಲಾಭ ಬಳಸಿ ಅವರಿಗೆ ಸ್ವಲ್ಪ ಕೂಲಿ ಹೆಚ್ಚಿಸುವ ಯೋಚನೆ ಮಾಡಲಾಗಿದೆ. ಆದರೆ ಈ ಬಗ್ಗೆ ತಪ್ಪು ಸಂದೇಶ ಹರಡುವುದು ಕಂಡುಬಂದಿದೆ. ಈ ರೀತಿ ತಪ್ಪು ಸಂದೇಶ ಹರಡುವುದು ಸಮಾಜದ ಹಿತದೃಷ್ಟಿಯಿಂದ ಸರಿಯಲ್ಲ.
ADVERTISEMENT
ADVERTISEMENT