ಡಿಕೆಶಿ ಭೇಟಿ ಆದ ಜೆಡಿಎಸ್​ ಶಾಸಕ ಶಿವಲಿಂಗೇಗೌಡ

ಅರಸೀಕೆರೆ ವಿಧಾನಸಭಾ ಕ್ಷೇತ್ರದ ಜೆಡಿಎಸ್​ ಶಾಸಕ ಕೆ ಎಂ ಶಿವಲಿಂಗೇಗೌಡ ಅವರು ಕೆಪಿಸಿಸ ಅಧ್ಯಕ್ಷ ಡಿಕೆ ಶಿವಕುಮಾರ್​ ಅವರನ್ನು ಭೇಟಿ ಆಗಿದ್ದಾರೆ.
ಬೆಂಗಳೂರಿನಲ್ಲಿರುವ ಡಿಕೆ ಶಿವಕುಮಾರ್​ ನಿವಾಸದಲ್ಲಿ ಭೇಟಿ ನಡೆದಿದೆ.
ಈ ಮೂಲಕ ಶಿವಲಿಂಗೇಗೌಡ ಅವರ ಕಾಂಗ್ರೆಸ್​ ಸೇರ್ಪಡೆ ಖಚಿತವಾಗಿದೆ.
ಅರಸೀಕೆರೆಯಲ್ಲಿ ನಡೆದಿದ್ದ ಪಂಚರತ್ನ ಯಾತ್ರೆಯಲ್ಲಿ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್​ ಶಾಸಕಾಂಗ ಪಕ್ಷದ ನಾಯಕ ಹೆಚ್​ ಡಿ ಕುಮಾರಸ್ವಾಮಿ ಅವರು ಕ್ಷೇತ್ರದಲ್ಲಿ ಈ ಬಾರಿ ಶಿವಲಿಂಗೇಗೌಡ ಬದಲಿಗೆ ಹೊಸ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ಮಾತಾಡಿದ್ದರು.
ಶಿವಲಿಂಗೇಗೌಡ ಅವರು ಕಾಂಗ್ರೆಸ್​ ಸೇರ್ಪಡೆಯಾದ್ರೆ ಅವರೇ ಅರಸೀಕೆರೆಯಿಂದ ಕಾಂಗ್ರೆಸ್​ ಅಭ್ಯರ್ಥಿಯಾಗುವ ನಿರೀಕ್ಷೆ ಇದೆ.

LEAVE A REPLY

Please enter your comment!
Please enter your name here