ಕೊಡಗಿನ ಪೊನ್ನಂಪೇಟೆಯ ಸಾಯಿ ಶಂಕರ ವಿದ್ಯಾಸಂಸ್ಥೆಯಲ್ಲಿ ನಡೆದ ‘ಶೌರ್ಯ ಪ್ರಶಿಕ್ಷಣ ವರ್ಗ’ದಲ್ಲಿ ಬಜರಂಗದಳದ ಕಾರ್ಯಕರ್ತರಿಗೆ ಶಸ್ತ್ರಾಸ್ತ್ರ ತರಬೇತಿ, ತ್ರಿಶೂಲ ದೀಕ್ಷೆ ನೀಡಲಾಗಿದೆ. ಕಾರ್ಯಕರ್ತರಿಗೆ ಶಸ್ತ್ರಾಸ್ತ್ರ ತರಬೇತಿ ನೀಡಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದೆ.
ಸುಮಾರು ಹತ್ತು ದಿನ ಶಿಬಿರಕ್ಕೆ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಸಹ ಭೇಟಿ ನೀಡಿದ್ದರು ಎಂದು ತಿಳಿದುಬಂದಿದೆ.
ಬಜರಂಗದಳ, ವಿಶ್ವ ಹಿಂದೂ ಪರಿಷತ್ನ ವಿವಿಧ ಜಿಲ್ಲೆಗಳ 119 ಶಿಕ್ಷಣಾರ್ಥಿಗಳು ಸೇರಿ 140 ಮಂದಿ ಈ ಶಿಬಿರದಲ್ಲಿ ಇದ್ದರು.
ಶಾಲಾ ಆವರಣದಲ್ಲಿ ಬಂದೂಕು ಹಿಡಿದು ತರಬೇತಿ ಪಡೆಯುತ್ತಿರುವುದು, ಸಂಸ್ಥೆಯ ಸಭಾಂಗಣ ಮತ್ತು ಆವರಣದಲ್ಲಿ ತ್ರಿಶೂಲ ಹಿಡಿದು ದೀಕ್ಷೆ ಪಡೆಯುತ್ತಿರುವುದು, ತ್ರಿಶೂಲಕ್ಕೆ ಪೂಜೆ ಸಲ್ಲಿಸುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
ಮಾನ್ಯ @BCNagesh_bjp ರವರೇ ಶಾಲೆಗಳಲ್ಲಿ ಹಿಜಾಬ್ ಗೆ ನಿರ್ಭಂದ ವಿಧಿಸಿರುವ ನಿಮ್ಮ ಸರ್ಕಾರ, @bajarang_dal ಕ್ಕೆ ಒಂದು ವಾರದ ಅಕ್ರಮ ಶಸ್ತ್ರಾಸ್ತ್ರ ತರಬೇತಿ ಶಿಬಿರ ನಡೆಸಲು ಅನುಮತಿ ಕೊಟ್ಟ ಕೊಡಗು ಜಿಲ್ಲೆಯ ಪೊನ್ನಂಪೇಟೆಯ ಸಾಯಿ ಶಂಕರ್ ಶಿಕ್ಷಣ ಸಂಸ್ಥೆಯ ವಿರುದ್ಧ ಯಾವ ಕ್ರಮ ಕೈಗೊಂಡಿದೆ?@KodaguSp
@DgpKarnataka@PrasthuthaNews pic.twitter.com/0J2uFhfAQ5— afsarkodlipet (@afsarkodlipet) May 15, 2022
ಈ ಬಗ್ಗೆ ಪ್ರತಿಕ್ರಿಯಿಸಿರುವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಜರು ಗಣಪತಿಯವರು, ‘ಶಸ್ತ್ರಾಸ್ತ್ರ ತರಬೇತಿಯ ಮಾಹಿತಿ ಇಲ್ಲ. ಆಯೋಜಕರೇ ಊಟ, ಮತ್ತಿತರ ವ್ಯವಸ್ಥೆ ಮಾಡಿಕೊಂಡಿದ್ದರು. ಇದರಲ್ಲಿ ಸಂಸ್ಥೆಯ ಪಾತ್ರ ಎಲ್ಲ ಎಂದಿದ್ದಾರೆ.
ವಿಚಾರ ತಿಳಿಯದೆ ಆಕ್ಷೇಪಿಸುತ್ತಿರುವರಿಗೆ ತಲೆ ಸರಿಯಿಲ್ಲ. ಶೌರ್ಯ ಪ್ರಶಿಕ್ಷಣ ವರ್ಗದಲ್ಲಿ ಶಸ್ತ್ರಾಸ್ತ್ರ ತರಬೇತಿ ಕೊಡುವುದಿಲ್ಲ. ಯೋಗ ಕಲಿಸುವ, ಆತ್ಮಸ್ಥೈರ್ಯ ತುಂಬುವ ಕೆಲಸ ನಡೆಯಲಿದೆ’ ಎಂದು ವಿಶ್ವ ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಅಧ್ಯಕ್ಷ ಪಿ.ಕೃಷ್ಣಮೂರ್ತಿ ಹೇಳಿದ್ದಾರೆ.
ಕಾರ್ಯಕ್ರಮದ ಚಿತ್ರಗಳು ಜಾಲತಾಣದಲ್ಲಿ ವೈರಲ್ ಆದ ನಂತರ ಪೊಲೀಸರು ಶಿಬಿರದ ಮಾಹಿತಿ ಕಲೆಹಾಕಿದ್ಧಾರೆ ಎಂದು ಮೂಲಗಳು ತಿಳಿಸಿವೆ. ಪ್ರತಿಕ್ರಿಯೆಗೆ ಎಸ್ಪಿ ಅಯ್ಯಪ್ಪ ಅವರನ್ನು ಸಂಪರ್ಕಿಸಿದರೂ ಕರೆ ಸ್ವೀಕರಿಸಲಿಲ್ಲ.
https://youtu.be/PIY7X7wa7QM