ಆರೋಗ್ಯ ಭಾಗ್ಯ ಯೋಜನೆಯಡಿಯಲ್ಲಿ ಚಿಕಿತ್ಸೆ ನೀಡುವ ಆಸ್ಪತ್ರೆಗಳ ಪಟ್ಟಿಗೆ ಹೊಸ ಆಸ್ಪತ್ರೆಯನ್ನು ಸೇರ್ಪಡೆಗೊಳಿಸಿ ಪೊಲೀಸ್ ಮಹಾನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
ಆರೋಗ್ಯ ಭಾಗ್ಯ ಯೋಜನೆಯಡಿ ನಿವೃತ್ತ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಮತ್ತು ಅವರ ಪತಿ ಅಥವಾ ಪತ್ನಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಗಳ ಪಟ್ಟಿಗೆ ಮೈಸೂರು ನಗರದ ಡಾ ಅಗರ್ವಾಲ್ ಐ ಹಾಸ್ಪಿಟಲ್ನ್ನು ಸೇರ್ಪಡೆಗೊಳಿಸಲಾಗಿದೆ.
ಆರೋಗ್ಯ ಭಾಗ್ಯ ಯೋಜನೆಯಡಿಯಲ್ಲಿ ಈಗ ಸೇವೆ ಸಲ್ಲಿಸುತ್ತಿರುವ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಮತ್ತು ಅವರ ಕುಟುಂಬದವರಿಗೆ ಚಿಕಿತ್ಸೆ ನೀಡಲಾಗುತ್ತದೆ.
ನಿವೃತ್ತ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಮತ್ತು ಅವರ ಕುಟುಂಬಕ್ಕೆ ವರ್ಷಕ್ಕೆ ಒಟ್ಟು 2 ಲಕ್ಷ ರೂಪಾಯಿ ಗರಿಷ್ಠ ಮಿತಿಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.
ADVERTISEMENT
ADVERTISEMENT