ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆಯಿಂದ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹಿಂದೆ ಸರಿದಿದ್ದಾರೆ.
ನಾಳೆ ಶುಕ್ರವಾರ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ರಾಜಸ್ಥಾನದಲ್ಲಿ ಆದ ರಾಜಕೀಯ ಬೆಳವಣಿಗೆಗಳ ಬಗ್ಗೆಯೂ ಗೆಹ್ಲೋಟ್ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಳಿ ಕ್ಷಮೆ ಕೋರಿದ್ದಾರೆ.
ಅಶೋಕ್ ಗೆಹ್ಲೋಟ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಖಚಿತವಾಗಿ ಸ್ಪರ್ಧಿಸಲ್ಲಿದ್ದಾರೆ ಎನ್ನಲಾಗಿತ್ತು. ಆ ಬಳಿಕ ರಾಜಸ್ಥಾನದ ಮುಖ್ಯಮಂತ್ರಿ ಸ್ಥಾನಕ್ಕೆ ಸಂಬಂಧಿಸಿದಂತೆ ವಿವಾದ ಉಂಟಾಗಿತ್ತು. ಸಚಿನ್ ಪೈಲಟ್ ಮುಖ್ಯಮಂತ್ರಿಯಾಗುವ ನಿಟ್ಟಿನಲ್ಲಿ ಮಾತುಕತೆ ನಡೆದಿತ್ತು. ಆದರೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಬಣದ 91 ಶಾಸಕರು ಗುಂಪುಗೂಡಿ ಸಚಿನ್ ಪೈಲಟ್ರನ್ನು ವಿರೋಧಿಸಿದ್ದರು.
ಆ ಬಳಿಕ ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟು ಏರ್ಪಟ್ಟಿತ್ತು. ಕೇಂದ್ರದಿಂದ ಮಲ್ಲಿಕಾರ್ಜುನ್ ಖರ್ಗೆ ನೇತೃತ್ವದಲ್ಲಿ ಸಮಿತಿ ಬಂದು ಸೋನಿಯಾ ಗಾಂಧಿಯವರಿಗೆ ವರದಿ ನೀಡಿತ್ತು. ಇಂದು ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಿದ ಅಶೋಕ್ ಗೆಹ್ಲೋಟ್ ಕ್ಷಮೆ ಕೋರಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಸೆಪ್ಟಂಬರ್ 30 ಕೊನೆಯ ದಿನಾಂಕ, ಅಕ್ಟೋಬರ್ 8 ನಾಮಪತ್ರ ನಾಮಪತ್ರ ವಾಪಾಸ್ ಪಡೆಯಲು ಕೊನೆಯ ದಿನಾಂಕ. ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದ್ದು, ಅಕ್ಟೋಬರ್ 19ಕ್ಕೆ ಫಲಿತಾಂಶ ಪ್ರಕಟವಾಗಲಿದೆ.