ಚುನಾವಣಾಧಿಕಾರಿ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಬಾಲಿವುಡ್ ನಟ ಮತ್ತು ಕಾಂಗ್ರೆಸ್ ನಾಯಕ ರಾಜ್ ಬಬ್ಬರ್ ಅವರಿಗೆ ಉತ್ತರ ಪ್ರದೇಶದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ಮೇ 2, 1996 ರಂದು ಮತಗಟ್ಟೆ ಅಧಿಕಾರಿ ವಜೀರ್ಗಂಜ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದರು. ನ್ಯಾಯಾಲಯ ರಾಜ್ ಬಬ್ಬರ್ ಗೆ 8,500 ರೂಪಾಯಿ ದಂಡವನ್ನೂ ವಿಧಿಸಿದೆ. ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಮತ್ತು ಹಲ್ಲೆ ಮಾಡಿದ ಆರೋಪದಲ್ಲಿ ನಟ-ರಾಜಕಾರಣಿ ರಾಜ್ ಬಬ್ಬರ್ ಶಿಕ್ಷೆ ವಿಧಿಸಲಾಗಿದೆ.
ಘಟನೆ ನಡೆದ ಸಮಯದಲ್ಲಿ, ರಾಜ್ ಬಬ್ಬರ್ ಸಮಾಜವಾದಿ ಪಕ್ಷದಲ್ಲಿದ್ದರು ಮತ್ತು ಲಕ್ನೋದಿಂದ ಚುನಾವಣೆಗೆ ಸ್ಪರ್ಧಿಸಿದ್ದರು. ಚುನಾವಣೆ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ಹಲ್ಲೆ ನಡೆದಿದೆ.
ರಾಜ್ ಬಬ್ಬರ್ ಮತ್ತು ಅರವಿಂದ್ ಯಾದವ್ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 143, 332, 353, 323, 504, 188 ರ ವಿರುದ್ಧ ಪೊಲೀಸರು ದೂರು ದಾಖಲಿಸಿದ್ದರು. ಪ್ರಜಾಪ್ರತಿನಿಧಿ ಕಾಯ್ದೆಯ ಹೊರತಾಗಿ, ಕ್ರಿಮಿನಲ್ ಕಾನೂನು ತಿದ್ದುಪಡಿ ಕಾಯ್ದೆಯಡಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು.
ತೀರ್ಪು ಪ್ರಕಟವಾದಾಗ ರಾಜ್ ಬಬ್ಬರ್ ನ್ಯಾಯಾಲಯದಲ್ಲಿ ಹಾಜರಿದ್ದರು. 1996 ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಅವರು ರ್ಕಾರಿ ಅಧಿಕಾರಿ ವಿರುದ್ಧ ಈ ಹಲ್ಲೆ ಆರೋಪದಲ್ಲಿ ತಪ್ಪಿತಸ್ಥರೆಂದು ಕಂಡುಬಂದರೂ ನಂತರ ಜಾಮೀನು ಪಡೆದು ಹೊರ ಬಂದಿದ್ದರು.