ಕಾರವಾರ: ಕುಡಿದ ಮತ್ತಿನಲ್ಲಿ ಕರ್ತವ್ಯ ನಿರತ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ಮತ್ತು ಹಣದ ವಂಚನೆಯ ಪ್ರಕರಣಕ್ಕೆ ಸಂಬಂಧಿಸಿ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ವಿ.ಎಸ್ ಪಾಟೀಲ್ ಅವರ ಪುತ್ರನನ್ನು ಶನಿವಾರ ರಾತ್ರಿ ಬೆಂಗಳೂರಿನಲ್ಲಿ ಮುಂಡಗೋಡು ಪೊಲೀಸರು ಬಂಧಿಸಿದ್ದಾರೆ.
ಬಾಪುಗೌಡ ಪಾಟೀಲ್ ಬಂಧಿತ ಆರೋಪಿ. 2011ರಲ್ಲಿ ಮುಂಡಗೋಡ ಅರಣ್ಯ ಇಲಾಖೆಯ ಐಬಿಯಲ್ಲಿ ಕುಡಿದ ಮತ್ತಿನಲ್ಲಿ15 ಜನರ ಜೊತೆ ಸೇರಿ ಎಎಸ್ಐ ಬಾಲಕೃಷ್ಣ ಪಾಲೇಕರ್ ಮೇಲೆ ಹಲ್ಲೆ ನಡೆಸಿದ್ದರು.