No Result
View All Result
ಅಯೋಧ್ಯೆಯಲ್ಲಿ ಶ್ರೀ ರಾಮದೇವರ ಪ್ರಾಣ ಪ್ರತಿಷ್ಠೆ ಮುಂದಿನ ಜನವರಿ 22ರಂದು ನಡೆಯಲಿದ್ದು, ಆ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಶ್ರೀರಾಮ ಜನ್ಮಭೂಮಿ ಟ್ರಸ್ಟ್ ಆಹ್ವಾನಿಸಿದೆ.
ಇಂದು ಬೆಳಗ್ಗೆ ಬೆಂಗಳೂರಿನ ಮಾಜಿ ಮುಖ್ಯಮಂತ್ರಿಗಳ ನಿವಾಸಕ್ಕೆ ಭೇಟಿ ನೀಡಿದ್ದ ಟ್ರಸ್ಟ್ ನ ಪ್ರಮುಖರು, ಆಹ್ವಾನ ಪತ್ರಿಕೆ ನೀಡಿ ಕುಟುಂಬ ಸಮೇತವಾಗಿ ತಾವು ಈ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು ಎಂದು ಕೋರಿದರು.
ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ದ ಅಖಿಲ ಭಾರತೀಯ ಸಂಪರ್ಕ್ ಪ್ರಮುಖ್ ಆಗಿರುವ ರಾಮ ಲಾಲ್ ಮತ್ತಿತರರು ಟ್ರಸ್ಟ್ ಪರವಾಗಿ ಕುಮಾರಸ್ವಾಮಿ ಹಾಗೂ ಅವರ ಪತ್ನಿ ಶ್ರೀಮತಿ ಅನಿತಾ ಕುಮಾರಸ್ವಾಮಿ, ಅವರ ಪುತ್ರ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರಿಗೆ ಆಹ್ವಾನ ನೀಡಿದರು.
ಆಹ್ವಾನ ಸ್ವೀಕರಿಸಿದ ಮಾಜಿ ಮುಖ್ಯಮಂತ್ರಿಗಳು, ಕುಟುಂಬ ಸಮೇತ ರಾಮದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಾಗಿ ರಾಮ್ ಲಾಲ್ ಅವರಿಗೆ ತಿಳಿಸಿದರು. ಅಲ್ಲದೆ, ರಾಮಜನ್ಮಭೂಮಿಯಲ್ಲಿ ಭವ್ಯ ಮಂದಿರ ನಿರ್ಮಾಣ ಆಗುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.
ಈಗಾಗಲೇ ಟ್ರಸ್ಟ್ ನ ಪ್ರಮುಖರು ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರಿಗೆ ಆಹ್ವಾನ ನೀಡಿದ್ದಾರೆ.
No Result
View All Result
error: Content is protected !!