ಮತ್ತೋರ್ವ ಲಿಂಗಾಯತ ನಾಯಕನನ್ನು ಮುಗಿಸಲು ಸಂತೋಷ್​, ಜೋಶಿ ಹುನ್ನಾರ ಆರೋಪ

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬಳಿಕ ಮತ್ತೋರ್ವ ಲಿಂಗಾಯತ ನಾಯಕನನ್ನು ಮುಗಿಸಲು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್​ ಸಂತೋಷ್​ ಅವರ ಬಣ ಹುನ್ನಾರ ಮಾಡುತ್ತಿದೆ ಎಂದು ಕಾಂಗ್ರೆಸ್​ ಆರೋಪ ಮಾಡಿದೆ.

ಸಿಎಂ ಆದರೂ ಬಿಜೆಪಿಯ ಗರ್ಭಗುಡಿಯ ಒಳಗೆ ಪ್ರವೇಶ ಪಡೆಯಲಾಗದ ವಲಸಿಗ ಬೊಮ್ಮಾಯಿಯವರೇ ಜೋಶಿ ಸಂತೋಷರ ಮುಂದಿನ ಟಾರ್ಗೆಟ್!

ಬೊಮ್ಮಾಯಿಯವರನ್ನು ಮುಗಿಸಿದರೆ “ಟಾರ್ಗೆಟ್ ಲಿಂಗಾಯತ” ಕಾರ್ಯಾಚರಣೆಯನ್ನು ಪೂರ್ಣಗೊಳಿಸಿದಂತಾಗುತ್ತದೆ!

ಎಂದು ಕಾಂಗ್ರೆಸ್​ ಆರೋಪಿಸಿದೆ.

ಟಾರ್ಗೆಟ್​ ಲಿಂಗಾಯತ ಕಾರ್ಯಾಚರಣೆ ಭಾಗವಾಗಿ ಸಂಸದ ಪ್ರತಾಪ್​ ಸಿಂಹ ಅವರನ್ನು ಅಸ್ತ್ರವಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಕಾಂಗ್ರೆಸ್​ ಆರೋಪಿಸಿದೆ.

ಜೋಶಿ, ಸಂತೋಷ್ ಅವರುಗಳು @mepratap ಹೆಗಲ ಮೇಲೆ ಗನ್ನಿಟ್ಟು ಶೂಟ್ ಮಾಡಿದ ಗುಂಡು @BSBommai ಅವರ ಎದೆಗೆ ತಗುಲಿದೆ!

ಎಂದು ಕಾಂಗ್ರೆಸ್​ ಆರೋಪಿಸಿದೆ.

ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಮೈಸೂರು ಸಂಸದ ಪ್ರತಾಪ್​ ಸಿಂಹ ಕೊಟ್ಟ ಹೇಳಿಕೆ ಮತ್ತು ಪ್ರತಾಪ್​ ಸಿಂಹಗೆ ಬೊಮ್ಮಾಯಿ ಕೊಟ್ಟ ತಿರುಗೇಟು ಉಲ್ಲೇಖಿಸಿ ಇದು ಬಿಜೆಪಿಯಲ್ಲಿ ಲಿಂಗಾಯತ ನಾಯಕರನ್ನು ಮುಗಿಸಲು ಪ್ರಹ್ಲಾದ್​ ಜೋಶಿ ಮತ್ತು ಬಿ ಎಲ್​ ಸಂತೋಷ್​ ಮಾಡುತ್ತಿರುವ ಹುನ್ನಾರ ಎಂದು ಕಾಂಗ್ರೆಸ್​ ಆರೋಪಿಸಿದೆ.