ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಚುನಾವಣಾ ನಿವೃತ್ತಿ ಘೋಷಿಸಿದ್ದಾರೆ ಮತ್ತು ಶಿಕಾರಿಪುರದಿಂದ ತಮ್ಮ ಪುತ್ರ ವಿಜಯೇಂದ್ರ ಅವರೇ ಸ್ಪರ್ಧೆ ಮಾಡಲಿದ್ದಾರೆ ಎಂದು ಪ್ರಕಟಿಸಿದ್ದಾರೆ.
ಈ ಮೂಲಕ ತಮ್ಮ ಪುತ್ರ ವಿಜಯೇಂದ್ರ ಅವರು ಎಲ್ಲಿ ಸ್ಪರ್ಧೆ ಮಾಡಬಹುದು ಎಂಬ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಜೊತೆಗೆ ವಯಸ್ಸಿನ ಕಾರಣ ಕೊಟ್ಟು ತಮ್ಮನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸಿದ್ದ ಬಿಜೆಪಿಯ ದೆಹಲಿಯ ನಾಯಕರು ತಮಗೆ ಮುಂದಿನ ಚುನಾವಣೆಗೆ ಟಿಕೆಟ್ ನೀಡಲ್ಲ ಎಂಬುದನ್ನು ತಿಳಿದೇ ತಾವಾಗಿಯೇ ಮೊದಲು ಚುನಾವಣಾ ನಿವೃತ್ತಿ ಘೋಷಿಸಿದ್ದಾರೆ.
ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ದೆಹಲಿ ನಾಯಕರು ವಿಜಯೇಂದ್ರ ಅವರಿಗೆ ಟಿಕೆಟ್ ತಪ್ಪಿಸಿದ್ದರ ಹಿನ್ನೆಲೆಯಲ್ಲಿ ವಿಜಯೇಂದ್ರ ಅವರಿಗೆ ತಂದೆ ಯಡಿಯೂರಪ್ಪನವರೇ ವಿಧಾನಸಭಾ ಟಿಕೆಟ್ ಘೋಷಣೆ ಮಾಡಿರುವುದು ವಿಶೇಷ. ಈ ಮೂಲಕ ಹೈಕಮಾಂಡ್ಗೂ ಯಡಿಯೂರಪ್ಪ ಸಂದೇಶ ರವಾನಿಸಿದ್ದಾರೆ.
ಶಿಕಾರಿಪುರದಲ್ಲಿ ವಿಜಯೇಂದ್ರ ಅವರು ಸ್ಪರ್ಧೆ ಮಾಡಲಿದ್ದು ನನಗಿಂತಲೂ ಹೆಚ್ಚಿನ ಅಂತರದಿಂದ ಗೆಲ್ಲಿಸಿಕೊಡಬೇಕು. ಹಳೆ ಮೈಸೂರು ಭಾಗದಲ್ಲಿ ಸ್ಪರ್ಧೆ ಮಾಡ್ಬೇಕು ಎಂದು ಬಹಳ ಒತ್ತಡ ಇದೆ. ಆದರೆ ನಾನು ಕ್ಷೇತ್ರ ಖಾಲಿ ಇಡುವುದರಿಂದ ವಿಜಯೇಂದ್ರ ಶಿಕಾರಿಪುರ ತಾಲೂಕಲ್ಲಿ ನಿಲ್ತಾರೆ
ಎಂದು ಶಿಕಾರಿಪುರದಲ್ಲಿ ಯಡಿಯೂರಪ್ಪ ಹೇಳಿದ್ದಾರೆ.
ADVERTISEMENT
ADVERTISEMENT