ಬಂಡೆ ಮಠದ ಸ್ವಾಮೀಜಿ ಆತ್ಮಹತ್ಯೆ

ಕಂಚುಗಲ್ ಬಂಡೆ ಮಠದ ಬಸವಲಿಂಗ ಸ್ವಾಮೀಜಿ  ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಸೋಲೂರು ಬಳಿ ಇರುವ ಬಂಡೇಮಠದ ಬೆಟ್ಟದ ಮೇಲಿನ ಮನೆಯಲ್ಲಿ ಕಳೆದ ರಾತ್ರಿ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ..

ಮನೆಯ ಕಿಟಕಿಗೆ ನೇಣು ಬಿಗಿದುಕೊಂಡ ರೂಪದಲ್ಲಿ 56 ವರ್ಷದ ಪೀಠಾಧಿಪತಿ ಬಸವಲಿಂಗ ಸ್ವಾಮೀಜಿ ಶವ ಪತ್ತೆ ಆಗಿದೆ.

ಸ್ಥಳಕ್ಕೆ ಕುದೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯಕ್ಕೆ ಸ್ವಾಮೀಜಿಯ ಆತ್ಮಹತ್ಯೆಗೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ.

LEAVE A REPLY

Please enter your comment!
Please enter your name here