ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ನೆಹರುನಗರ ಅಕ್ಬರ್, ಗುರುವಾಯನಕೆರೆ ಸಿದ್ದೀಕ್, ಪುಂಜಾಲಕಟ್ಟೆ ಸಮೀರ್, ಬಂಧಿತ ಆರೋಪಿಗಳು. ಇತ್ತೀಚೆಗೆ ಬಂಟ್ವಾಳ ನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಬೈಕ್ ಕಳವು ಮಾಡಿದ ಪ್ರಕರಣದಲ್ಲಿ ಈ ಮೂವರು ಆರೋಪಿಗಳ ಬಂಧನ ಮಾಡಲಾಗಿದೆ.
ಬಂಟ್ವಾಳ ಸಮೀಪದಮಣಿಹಳ್ಳ ಎಂಬಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಬೈಕ್ ಹಾಗೂ ಬಿಸಿರೋಡು ರೈಲ್ವೆ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬೈಕ್ ಗಳ ಕಳ್ಳತನ ನಡೆದಿದ್ದು, ಬಂಟ್ವಾಳ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿಗಳ ಬಂಧನದ ಬಳಿಕ ಆರೋಪಿಗಳಿಂದ ಕಳ್ಳತನ ಮಾಡಿದ್ದ ಎರಡು ಬೈಕ್ ಹಾಗೂ ಕೃತ್ಯಕ್ಕೆ ಉಪಯೋಗಿಸಿದ ಕಾರನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಆರೋಪಿಗಳನ್ನು ಪೋಲೀಸ್ ಕಸ್ಟಡಿಗೆ ನೀಡಿದೆ.