ಕರ್ನಾಟಕ ಹಾಲು ಒಕ್ಕೂಟಕ್ಕೆ ಕಾಂಗ್ರೆಸ್​ ಮಾಜಿ ಶಾಸಕ ಅಧ್ಯಕ್ಷ

ಕರ್ನಾಟಕ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಕಾಂಗ್ರೆಸ್ ಮಾಜಿ​ ಶಾಸಕ ಭೀಮಾನಾಯ್ಕ್​ ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್​ ಸರ್ಕಾರ ಬಂದ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೆಎಂಎಫ್​ ಅಧ್ಯಕ್ಷರಾಗಿ ಆಯ್ಕೆ ಆಗಿದ್ದ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧ್ಯಕ್ಷ ಸ್ಥಾನ ಕಳೆದುಕೊಂಡಿದ್ದರು.

ಕೆಎಂಎಫ್​ ಅಧ್ಯಕ್ಷ ಸ್ಥಾನಕ್ಕೆ ಹಗರಿಬೊಮ್ಮನಹಳ್ಳಿ ಮಾಜಿ ಶಾಸಕ ಭೀಮಾನಾಯ್ಕ್​ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಒಟ್ಟು 14 ಒಕ್ಕೂಟದ ಪ್ರತಿನಿಧಿಗಳು, ಪಶುಸಂಗೋಪನಾ ಇಲಾಖೆ ನಿರ್ದೇಶಕ, ಸಹಕಾರ ಇಲಾಖೆ ರಿಜಿಸ್ಟಾರ್‌, ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಒಬ್ಬರು ನಾಮನಿರ್ದೇಶಿತ ಸದಸ್ಯರು ಸೇರಿ ಒಟ್ಟು 18 ಮಂದಿ ಮತದಾನದ ಹಕ್ಕು ಹೊಂದಿದ್ದರು.

ಅಮುಲ್​ ಬಳಿಕ ಕೆಎಂಎಫ್​ ದೇಶದಲ್ಲಿ ಎರಡನೇ ಅತೀ ದೊಡ್ಡ ಹಾಲು ಒಕ್ಕೂಟವಾಗಿದೆ.