ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ವಸಂತ ಬಂಗೇರ ಅವರು ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು.
ನಾಳೆ ಬೆಳಗ್ಗೆ ವಸಂತ ಬಂಗೇರ ಅವರ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸಲಿದ್ದು, ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ.
ಸಿಎಂ ಸಿದ್ದರಾಮಯ್ಯ ಸಂತಾಪ
ನನ್ನ ಆತ್ಮೀಯ ಗೆಳೆಯ ಮತ್ತು ದೀರ್ಘ ಕಾಲದ ಸಹದ್ಯೋಗಿ ಬೆಳ್ತಂಗಡಿಯ ಮಾಜಿ ಶಾಸಕ ಕೆ.ವಸಂತ ಬಂಗೇರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ನೇರ, ನಿಷ್ಠುರ ನಡೆ-ನುಡಿಯ ಬಂಗೇರ, ಆಂತರ್ಯದಲ್ಲಿ ಅಪಾರವಾದ ಜನಪರ ಕಾಳಜಿ ಮತ್ತು ಸ್ನೇಹನಿಷ್ಠೆಯನ್ನು ಹೊಂದಿದ್ದ ದೊಡ್ಡ ಮನುಷ್ಯ. ಅನಾರೋಗ್ಯದಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದ ಬಂಗೇರ ಅವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿ ಮಾತನಾಡಿಸಿದ್ದೆ. ಇಷ್ಟು ಬೇಗ ನಮ್ಮನ್ನು ಅಗಲಿ ಹೋಗುತ್ತಾರೆ ಎಂದು ನಿರೀಕ್ಷಿಸಿರಲಿಲ್ಲ. ಬಂಗೇರ ಅವರ ಕುಟುಂಬದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ.
ಎಂದು ಸಿಎಂ ಸಿದ್ದರಾಮಯ್ಯ ವಿಷಾದ ವ್ಯಕ್ತಪಡಿಸಿದ್ದಾರೆ.
ADVERTISEMENT
ADVERTISEMENT