ಬೆಂಗಳೂರಿನಲ್ಲಿ ಶನಿವಾರ ರಾತ್ರಿ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ರಾತ್ರಿ 2 ಗಂಟೆಗಳ ಕಾಲ ಮಳೆ ಎಡೆಬಿಡದೇ ಸುರಿದಿದ್ದು, ಅಲ್ಲಲ್ಲಿ ಮರಗಳು ಉರುಳಿ ಬಿದ್ದಿವೆ.
ಪದ್ಮನಾಭನಗರದಲ್ಲಿ ಮರ ನಿಂತ ಕಾರಿನ ಮೇಲೆ ಉರುಳಿಬಿದ್ದಿದೆ. ಮರ ಬಿದ್ದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ.
ಶನಿವಾರ ರಾತ್ರಿ ಸುರಿದ ಮಳೆಗೆ ಹಲವು ಏರಿಯಾಗಳು ಸಂಪೂರ್ಣ ನೀರಿನಿಂದ ಜಲಾವೃತವಾಗಿವೆ.