ADVERTISEMENT
ಬೆಂಗಳೂರಿಗರು ಮತ್ತು ಬೆಂಗಳೂರಿಗೆ ಬಂದು ಹೋಗುವವರು ಓದಲೇಬೇಕಾದ ಸುದ್ದಿ. ವಿವಿಧ ಜಿಲ್ಲೆಗಳಿಗೆ ರಾಜಧಾನಿಯೊಂದಿಗೆ ಸಂಪರ್ಕ ಕಲ್ಪಿಸುವ ಬೆಂಗಳೂರಿನ ಪೀಣ್ಯ ಮೇಲ್ಸೆತುವೆ ನಾಲ್ಕು ದಿನ ಕಾಲ ಬಂದ್ ಆಗಿರಲಿದೆ.
ಜನವರಿ 16ರ ರಾತ್ರಿ 11 ಗಂಟೆಯಿಂದ ಜನವರಿ 19ರ ಬೆಳಗ್ಗೆ 11 ಗಂಟೆಯವರೆಗೆ ಪೀಣ್ಯ ಮೇಲ್ಸೆತುವೆಯಲ್ಲಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.
ಈ ಮೇಲ್ಸೆತುವೆಯ ಭಾರ ಸಾಮರ್ಥ್ಯ ಪರೀಕ್ಷೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸಂಚಾರವನ್ನು ನಿರ್ಬಂಧಿಸಿದೆ.
ಪೀಣ್ಯ ಫ್ಲೈಓವರ್ ಬಂದ್ ಹಿನ್ನೆಲೆಯಲ್ಲಿ ಬೆಂಗಳೂರು ಸಂಚಾರಿ ಪೊಲೀಸರು ಪರ್ಯಾಯ ಮಾರ್ಗವನ್ನು ಸೂಚಿಸಿದ್ದಾರೆ.
1. ನೆಲಮಂಗಲ ಕಡೆಯಿಂದ ಬೆಂಗಳೂರು ನಗರಕ್ಕೆ ಫ್ಲೈ ಓವರ್ ರಸ್ತೆಯ ಮೂಲಕ ಸಾಗುವ ವಾಹನಗಳು ಕೆನ್ನಮೆಟಲ್ ವಿಡಿಯಾ ಹತ್ತಿರ ಫ್ಲೈಓವರ್ ಪಕ್ಕದ ಎನ್ ಹೆಚ್-4 ಮತ್ತು ಸರ್ವಿಸ್ ರಸ್ತೆಯ ಮೂಲಕ 8ನೇ ಮೈಲಿ-ದಾಸರಹಳ್ಳಿ, ಜಾಲಹಳ್ಳಿ ಕ್ರಾಸ್, ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್-ಎಸ್ ಆರ್ ಎಸ್ ಜಂಕ್ಷನ್ ಮೂಲಕ ಗೊರಗುಂಟೆಪಾಳ್ಯ ತಲುಪಬಹುದು.
2. ಸಿಎಂಟಿಐ ಜಂಕ್ಷನ್ ನಿಂದ ನೆಲಮಂಗಲ ಕಡೆಗೆ ಫ್ಲೈ ಓವರ್ ರಸ್ತೆಯಲ್ಲಿ ಸಾಗುವ ವಾಹನಗಳು ಪಾರ್ಲೆ-ಜಿ ಟೋಲ್ ತಲುಪಲು ಫ್ಲೈ ಓವರ್ ಪಕ್ಕದ ಎನ್ ಹೆಚ್-4 ಮತ್ತು ಸರ್ವಿಸ್ ರಸ್ತೆಯಲ್ಲಿ SRS ಜಂಕ್ಷನ್, ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್-ಜಾಲಹಳ್ಳಿ ಕ್ರಾಸ್, ದಾಸರಹಳ್ಳಿ- 8ನೇ ಮೈಲಿ ಮುಖಾಂತರ ಸಂಚರಿಸಲು ಅನುವು.
ADVERTISEMENT