CM ಸಿದ್ದರಾಮಯ್ಯ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಮೊದಲ ಬಾರಿಗೆ ಹಿರಿಯ IPS ಅಧಿಕಾರಿಗಳ ವರ್ಗಾವಣೆ

ಅಧಿಕಾರಕ್ಕೆ ಬಂದ ಬಳಿಕ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ಪೊಲೀಸ್​ ಇಲಾಖೆಯಲ್ಲಿ ಇದೇ ಮೊದಲ ಬಾರಿಗೆ ಪ್ರಮುಖ ವರ್ಗಾವಣೆ ಮಾಡಿದೆ.
ಬೆಂಗಳೂರು ನಗರದ ಹೊಸ ಪೊಲೀಸ್​ ಆಯುಕ್ತರಾಗಿ ಬಿ ದಯಾನಂದ ಅವರು ನೇಮಕಗೊಂಡಿದ್ದಾರೆ. ಇಲ್ಲಿಯವರೆಗೆ ಅವರು ಗುಪ್ತಚರ ದಳ ಎಡಿಜಿಪಿ ಆಗಿದ್ದರು.
ಬೆಂಗಳೂರು ನಗರ ಪೊಲೀಸ್​ ಆಯುಕ್ತರಾಗಿದ್ದ ಸಿ ಹೆಚ್​ ಪ್ರತಾಪ್​ರೆಡ್ಡಿ ಅವರನ್ನು ಆಂತರಿಕ ಭದ್ರತೆಯ ಡಿಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ.
ಬೆಂಗಳೂರು ನಗರ ಸಂಚಾರಿ ಪೊಲೀಸ್​ ಇದರ ವಿಶೇಷ ಆಯುಕ್ತರಾಗಿದ್ದ ಡಾ ಎಂ ಎ ಸಲೀಂ ಅವರನ್ನು ಸಿಐಡಿ ತನಿಖಾ ಸಂಸ್ಥೆ ಆರ್ಥಿಕ ಅಪರಾಧ ವಿಭಾಗದ ಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.
ಸಿಐಡಿ ಎಡಿಜಿಪಿ ಆಗಿದ್ದ ಕೆ ವಿ ಶರತ್​ ಚಂದ್ರ ಅವರನ್ನು ಆಂತರಿಕ ಭದ್ರತಾ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.