Bengaluru ವಿವಿ PhD ಪ್ರವೇಶ ಪರೀಕ್ಷೆ ಅಕ್ರಮ – ಹೈಕೋರ್ಟ್​ನಿಂದ ನೋಟಿಸ್​

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ನಡೆದ ಪಿಎಚ್​ಡಿ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ ಸಂಬಂಧ ಕರ್ನಾಟಕ ಹೈಕೋರ್ಟ್​ ನೋಟಿಸ್​ ಜಾರಿಗೊಳಿಸಿದೆ. 

ಹೊಸದಾಗಿ ಪರೀಕ್ಷೆ ನಡೆಸುವಂತೆ ಕೋರಿ ಆದಿ ಮಂಜುನಾಥ್​ ಮತ್ತು ಇತರರು ಸಲ್ಲಿಸಿರುವ ಅರ್ಜಿಯನ್ನು ಪುರಸ್ಕರಿಸಿದ ಹೈಕೋರ್ಟ್​ ಬೆಂಗಳೂರು ವಿವಿಗೆ ನೋಟಿಸ್​ ನೀಡಿದೆ.

ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು ಹೊಸದಾಗಿ ಪರೀಕ್ಷೆ ನಡೆಸಲು ಆದೇಶಿಸುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಶೋಕ್‌ ಎಸ್‌.ಕಿಣಗಿ ಅವರ ಪೀಠ ನೋಟಿಸ್​ ನೀಡಿದೆ.

ಪಿಎಚ್‌ಡಿ ಪ್ರವೇಶಕ್ಕೆ 2023ರ ಏಪ್ರಿಲ್​ 13ರಂದು ನಡೆದ ಪರೀಕ್ಷೆ ನಡೆದಿತ್ತು.

ಪರೀಕ್ಷಾರ್ಥಿಗಳ ಗುರುತಿನ ಚೀಟಿ ಪರಿಶೀಲಿಸದೇ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಕೆಲ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಮೊಬೈಲ್‌ ತೆಗೆದುಕೊಂಡು ಹೋಗಿದ್ದು, ಮೊಬೈಲ್‌ನಲ್ಲಿ ಉತ್ತರಗಳನ್ನು ಹುಡುಕಿ ಬರೆದಿದ್ದಾರೆ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.

ಈಗಾಗಲೇ ಪಿಎಚ್‌ಡಿ ಮಾಡುತ್ತಿರುವ ವಿದ್ಯಾರ್ಥಿಗಳು ಸಹ ಪರೀಕ್ಷಾ ಕೇಂದ್ರದೊಳಗೆ ತೆರಳಿ, ಅಕ್ರಮ ನಡೆಯಲು ನೆರವು ನೀಡಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

LEAVE A REPLY

Please enter your comment!
Please enter your name here