Bharat Jodo Yatra : ಯಾತ್ರೆಗೆ ಮೈಸೂರಲ್ಲಿ ಪ್ರಿಯಾಂಕ ಗಾಂಧಿ ಸೇರ್ಪಡೆ ಸಾಧ್ಯತೆ

Bharat Jodo Yatra

ರಾಹುಲ್ ಗಾಂಧಿ ನೇತೃತ್ವದಲ್ಲಿ ಕನ್ಯಾಕುಮಾರಿಯಿಂದ ಆರಂಭವಾಗಿರುವ ಭಾರತ್ ಜೋಡೊ ಯಾತ್ರೆಗೆ (Bharat Jodo Yatra) ಮೈಸೂರಿನಲ್ಲಿ ಪ್ರಿಯಾಂಕ ಗಾಂಧಿ ಜೊತೆಯಾಗುವ ಸಾಧ್ಯತೆಯಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಭಾರತ್ ಜೋಡೊ ಯಾತ್ರೆ ಈಗ ಕೇರಳದಲ್ಲಿ ಇದೆ. ಈ ಪಾದಯಾತ್ರೆ ದಸರಾ ಅವಧಿಯಲ್ಲಿ ರಾಜ್ಯಕ್ಕೆ ಪ್ರವೇಶ ಪಡೆಯಲಿದೆ. ರಾಜ್ಯದಲ್ಲಿ ದಸರಾ ಸಂಭ್ರಮದ ವೇಳೆ ಕಾಂಗ್ರೆಸ್​ ನಾಯಕಿ ಹಾಗೂ ರಾಹುಲ್ ಗಾಂಧಿಯವರ ಸಹೋದರಿ ಪ್ರಿಯಾಂಕ ಗಾಂಧಿಯವರು ರಾಜ್ಯಕ್ಕೆ ಆಗಮಿಸಿ ಮೈಸೂರಿನಲ್ಲಿ ಭಾರತ್ ಜೋಡೊ ಯಾತ್ರೆಯೊಂದಿಗೆ ಸೇರ್ಪಡೆಯಾಗುವ ಸಾಧ್ಯತೆಯಿದೆ.

ರಾಜ್ಯದಲ್ಲಿ ಭಾರತ್ ಜೋಡೊ ಯಾತ್ರೆ 25 ದಿನಗಳ ಕಾಲ ನಡೆಯಲಿದೆ. ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಈ ಸಂಬಂಧ ಪ್ರತಿ ಜಿಲ್ಲೆಯಲ್ಲಿ ಪೂರ್ವಭಾವಿ ಸಭೆ ನಡೆಸಿ ಸಿದ್ಧತೆ ಆರಂಭಿಸಿದ್ದಾರೆ.

ಭಾರತ್ ಜೋಡೋ ಯಾತ್ರೆಯು ಕನ್ಯಾಕುಮಾರಿಯಿಂದ ಆರಂಭವಾಗಿದ್ದು, ಕಾಶ್ಮೀರದಲ್ಲಿ ಮುಕ್ತಾಯಗೊಳ್ಳಲಿದೆ. ಯಾತ್ರೆಯು 3,500 ಕಿ.ಮೀ ದೂರವನ್ನು ಕ್ರಮಿಸುತ್ತಿದ್ದು 12 ರಾಜ್ಯಗಳನ್ನು ಹಾದುಹೋಗಲಿದೆ. ಇದನ್ನೂ ಓದಿ : Bharat Jodo Yatra : ತರಕಾರಿ ಅಂಗಡಿಯಲ್ಲಿ ದೇಣಿಗೆ ಕೇಳಿದ್ದ ಕಾರ್ಯಕರ್ತರ ಕಾಂಗ್ರೆಸ್ ವಜಾ

LEAVE A REPLY

Please enter your comment!
Please enter your name here