Bharat Jodo Yatra : ಡಿಕೆ ಶಿವಕುಮಾರ್ ಸುದ್ದಿಗೋಷ್ಠಿಯ ಬ್ಯಾನರ್​ನಲ್ಲಿ ಸಿದ್ದರಾಮಯ್ಯರ ಫೋಟೋ ಮಾಯ

Bharat Jodo Yatra

ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಐಕ್ಯತಾ ಯಾತ್ರೆ (Bharat Jodo Yatra) ರಾಯಚೂರು ಜಿಲ್ಲೆಯ ಮೂಲಕ ಮುಂದೆ ಸಾಗಲಿದೆ. ಆ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ರಾಯಚೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಈ ವೇಳೆ ಹಾಕಿದ ಬ್ಯಾನರ್​ನಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಪೋಟೋ ಹಾಕದೇ ಇರುವುದು ವಿವಾದಕ್ಕೆ ಕಾರಣವಾಗಿದೆ.

ರಾಹುಲ್ ಗಾಂಧಿಯವರ ನೇತೃತ್ವದ ಭಾರತ ಐಕ್ಯತಾ ಯಾತ್ರೆ (Bharat Jodo Yatra) ರಾಯಚೂರು ಜಿಲ್ಲೆಯಲ್ಲಿ 50 ಕಿ.ಮೀ ಸಂಚರಿಸಲಿದೆ. ಎರಡು ದಿನಗಳ ಕಾಲ ರಾಹುಲ್ ಗಾಂಧಿ ರಾಯಚೂರಿನಲ್ಲಿ ಸಂಚರಿಸಲಿದ್ದಾರೆ. ಆ ಮೂಲಕ ರಾಹುಲ್ ಗಾಂಧಿ ರಾಜ್ಯದಲ್ಲಿ ಒಟ್ಟು 520 ಕೀ.ಮೀ ಸಂಚರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ರಾಯಚೂರಿಗೆ ಭೇಟಿ ನೀಡಿ ಪೂರ್ವಭಾವಿ ಸಭೆ ನಡೆಸಿದ್ದಾರೆ.

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೊಪ್ಪಳ ರಾಯಚೂರು ಬೀದರ್ ಕಲಬುರಗಿ ಭಾಗದ ಜನ ಭಾಗವಹಿಸಲು ವ್ಯವಸ್ಥೆ ಮಾಡುತ್ತೇವೆ. ಈ ಭಾಗದಲ್ಲಿ ರೈತರೊಂದಿಗೆ ಸಂವಾದ ಕಾರ್ಯಕ್ರಮ ಆಯೋಜಿಸಲಿದ್ದೇವೆ. ಈ ಯಾತ್ರೆಯಲ್ಲಿ ಡಿಜಿಟಲ್ ನೋಂದಣಿ, ಡಿಜಿಟಲ್ ಭಾಗವಹಿಸುವಿಕೆ ವ್ಯವಸ್ಥೆಯಿದೆ.  ಇದೇ ವೇಳೆ ಅಕ್ಟೋಬರ್ 16 ಕ್ಕೆ 3 ಗಂಟೆಗೆ ಎಐಸಿಸಿ ಸ್ಥಾನದ ಚುನಾವಣೆ ಬೆಂಗಳೂರು ಅಂಬೇಡ್ಕರ್ ಭವನದಲ್ಲಿ ನಡೆಯುತ್ತದೆ ಎಂದರು.

ಎಐಸಿಸಿ ಚುನಾವಣೆಯಲ್ಲಿ ರಾಹುಲ್ ಗಾಂಧಿ ಸ್ಪರ್ಧಿಸ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಡಿಕೆ ಶಿವಕುಮಾರ್, ರಾಹುಲ್ ಗಾಂಧಿ ಸ್ಪರ್ಧೆ ಬಗ್ಗೆ ನನಗೆ ಗೊತ್ತಿಲ್ಲ, ರಾಜ್ಯ ದೇಶ ಹೊಂದು ಮಾಡಲು ನಡೆಯುತ್ತಿದ್ದಾರೆ. ಬೆಲೆ ಏರಿಕೆ ತಪ್ಪಿಸಲು , ರೈತರಿಗೆ ಪ್ರೋತ್ಸಾಹ ಬೆಲೆ ಸಿಗಲು ನಡೆಯುತ್ತಿದ್ದಾರೆ. ಸದಸ್ಯರೆಲ್ಲರಿಗೂ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿದೆ. ನನ್ನ ಸ್ಪರ್ಧೆ ಬಗ್ಗೆ ಚರ್ಚೆಸಿ ನಿರ್ಧರಿಸುತ್ತೇನೆ ಎಂದು ಹೇಳಿದರು.

ಇದೇ ವೇಳೆ ಪ್ರೆಸ್ ಮೀಟ್ ನಲ್ಲಿ ಸಿದ್ದರಾಮಯ್ಯ ಭಾವಚಿತ್ರ ಹಾಕದೇ ಇರುವ ವಿಚಾರವಾಗಿ ಮಾತನಾಡಿದ ಅವರು, ನಾನು ನನ್ನ ಫೋಟೋನೂ ಹಾಕಬೇಡಿ ಅಂದಿದ್ದೆ. ಫೋಟೋನೇ ರಾಜಕೀಯ ಅಲ್ಲ. ಫೋಟೋ ಹಾಕದಿದ್ದರೇ ಏನಾಯ್ತು. ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರು ಅವರ ಕೆಲಸ ಅವರು ಮಾಡುತ್ತಿದ್ದಾರೆ. ಅವರು ಬಂದಾಗ ಅವರ ಫೋಟೋ ಹಾಕ್ತಾರೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here