ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿ, ಆತನ ತಾಯಿ ಭವಾನಿ ರೇವಣ್ಣ ತಾವು ನಿರೀಕ್ಷಣಾ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ, ಭವಾನಿ ರೇವಣ್ಣ ಮನವಿಯನ್ನು ತಿರಸ್ಕರಿಸಿದೆ.
ಅತ್ಯಾಚಾರ ಪ್ರಕರಣದ ಸಂತ್ರಸ್ತೆ, ರೇವಣ್ಣ ಮನೆಯ ಕೆಲಸದಾಕೆಯನ್ನ ಅಪಹರಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಸಂಕಷ್ಟ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು.
ಎಸ್ಐಟಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದರ ಹಿನ್ನೆಲೆಯಲ್ಲಿ ಭವಾನಿ ರೇವಣ್ಣ ಬಂಧನದ ಭೀತಿಯಲ್ಲಿದ್ದಾರೆ. ಇನ್ನು ಮೇ.08ರಿಂದ ಭವಾನಿ ರೇವಣ್ಣ ಯಾರ ಕೈಗೂ ಸಿಗದೆ ಅಜ್ಞಾತ ಸ್ಥಳದಲ್ಲಿದ್ದಾರೆ. ಈಗಾಗಲೇ ಭವಾನಿ ರೇವಣ್ಣ ಕಾರು ಚಾಲಕನಿಗೂ ಕೂಡ ಎಸ್ ಐಟಿ ಅಧಿಕಾರಿಗಳು ನೋಟೀಸ್ ನೀಡಿದ್ದರು.
ಇದೀಗ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತವಾಗಿರೋದ್ರಿಂದ ಭವಾನಿ ರೇವಣ್ಣ ಯಾವುದೇ ಕ್ಷಣದಲ್ಲಾದರೂ ಅರೆಸ್ಟ್ ಆಗುವ ಸಾಧ್ಯತೆ ಇದೆ.