BIG BREAKING: ಮುಖ್ಯಮಂತ್ರಿಯಾಗಿ ನಾಳೆಯೇ ಸಿದ್ದರಾಮಯ್ಯ ಪ್ರಮಾಣವಚನ

ಕರ್ನಾಟಕದ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಅವರ ಹೆಸರನ್ನು ಕಾಂಗ್ರೆಸ್​ ರಾಷ್ಟ್ರೀಯ ನಾಯಕರು ಅಂತಿಮಗೊಳಿಸಿದ್ದಾರೆ.

ನಾಳೆ ಮಧ್ಯಾಹ್ನ 3.30ಕ್ಕೆ ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಕರ್ನಾಟಕದ ಸಿಎಂ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಉಪ ಮುಖ್ಯಮಂತ್ರಿಯಾಗಿ ಡಿಕೆಶಿವಕುಮಾರ್​ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.