BIG BREAKING 20 ಲಕ್ಷ ಕೋಟಿ ರೂ. ಪ್ಯಾಕೇಜ್ ಘೋಷಣೆ

ಕೊರೋನಾ ಸಂಕಷ್ಟದಲ್ಲಿ ಸಿಲುಕಿದ ಭಾರತದ ಜನತೆಗೆ ಪ್ರಧಾನಿ ಮೋದಿ ಮೆಗಾ ಗಿಫ್ಟ್ ನೀಡಿದ್ದಾರೆ. ದೇಶದ ಆರ್ಥಿಕತೆಯ ಚೇತರಿಕೆಗಾಗಿ ಬರೋಬ್ಬರಿ 20 ಲಕ್ಷ ಕೊಟಿ ರೂಪಾಯಿಯ ಬೃಹತ್ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.

ರಾತ್ರಿ 8 ಗಂಟೆಗೆ ಸರಿಯಾಗಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಆರ್ಥಿಕ ಚೇತರಿಕೆಯ ಮಂತ್ರ ಪಠಿಸಿದರು. 20 ಲಕ್ಷ ಕೋಟಿ ರೂಪಾಯಿಗಳ ಪ್ಯಾಕೇಜ್ ಘೋಷಣೆ ಮಾಡಿದರು. ಇದರಿಂದ ದೇಶದ ವಿಭಿನ್ನ ವರ್ಗಕ್ಕೆ ಅನುಕೂಲವಾಗಲಿದೆ. ದೇಶದ ಶ್ರಮಿಕರು, ರೈತರು, ಬಡವರು, ಮಧ್ಯಮ ವರ್ಗ, ಗೃಹ ಕೈಗಾರಿಕೆ, ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ ಈ ಪ್ಯಾಕೇಜ್‍ನಿಂದ ಅನುಕೂಲ ಆಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.

ನಾಳೆ ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್ ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಲಿದ್ದಾರೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here