ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಈ ಭೂಕಂಪದಲ್ಲಿ 130 ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಈ ಭೂಕಂಪದ ಪ್ರಭಾವದಿಂದ ಪಾಕಿಸ್ತಾನದಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ.
ಅಫ್ಘಾನಿಸ್ತಾನದ ಪಕ್ತಿಕಾ ಪ್ರಾಂತ್ಯದಲ್ಲಿ 6.1 ತೀವ್ರತೆಯ ಭೂಕಂಪದ ಸಂಭವಿಸಿದೆ. ಯುಎಸ್ ಜಿಯೋಲಾಜಿಕಲ್ ಸರ್ವೆ (ಯುಎಸ್ಜಿಎಸ್) ಪ್ರಕಾರ, ಭೂಕಂಪದ ಕೇಂದ್ರಬಿಂದು ಅಫ್ಘಾನಿಸ್ತಾನದ ಆಗ್ನೇಯದಲ್ಲಿದೆ.
ಈ ದುರ್ಘಟನೆಯಲ್ಲಿ 140 ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದು, 250 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ಆಡಳಿತದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮುಖ್ಯಸ್ಥ ಮೊಹಮ್ಮದ್ ನಾಸಿಮ್ ಹಕ್ಕಾನಿ ಹೇಳಿದ್ದಾರೆ.
ಇನ್ನಷ್ಟು ಸಾವಿನ ಪ್ರಕರಣಗಳು ವರದಿಯಾಗಬಹುದು ಎಂದು ಅಫ್ಘಾನಿಸ್ತಾನದ ಅಧಿಕಾರಿಗಳು ಹೇಳುತ್ತಿದ್ದಾರೆ.
ಪಾಕಿಸ್ತಾನದಲ್ಲಿಯೂ ಭೂಕಂಪನದ ಅನುಭವ :
ಪಾಕಿಸ್ತಾನದ ಮಾಧ್ಯಮಗಳ ಪ್ರಕಾರ, ಇಸ್ಲಾಮಾಬಾದ್ ಸೇರಿದಂತೆ ಇತರ ನಗರಗಳಲ್ಲಿ ಭೂಕಂಪನದ ಅನುಭವವಾಗಿದೆ. ಸಾಮಾಜಿಕ ಜಾಲತಾಣಗಳಲ್ಲೂ ಭೂಕಂಪನದ ಬಗ್ಗೆ ಜನ ಮಾತನಾಡಿಕೊಳ್ಳುತ್ತಿದ್ದಾರೆ. ಕಳೆದ ಶುಕ್ರವಾರ ಪಾಕಿಸ್ತಾನದಲ್ಲಿ ಭೂಕಂಪ ಸಂಭವಿಸಿತ್ತು. ನಂತರ ಇಸ್ಲಾಮಾಬಾದ್, ಪೇಶಾವರ, ರಾವಲ್ಪಿಂಡಿ ಮತ್ತು ಮುಲ್ತಾನ್ನಲ್ಲಿ ಈ ಕಂಪನದ ಅನುಭವವಾಗಿತ್ತು.