ಕಾಂಗ್ರೆಸ್​​ಗೆ ಗುಲಾಂ ನಬಿ ಅಜಾದ್ ಗುಡ್​ ಬೈ

Jammu And Kashmir

ಕಾಂಗ್ರೆಸ್​​​ಗೆ ಮತ್ತೊಂದು ಶಾಕ್ ಎದುರಾಗಿದ್ದು, ಕಾಂಗ್ರೆಸ್​​ನ ಹಿರಿಯ ನಾಯಕ ಗುಲಾಂ ನಬಿ (Ghulam Nabi Azad) ಅಜಾದ್ ತಮ್ಮ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಕಾಂಗ್ರೆಸ್​ ಅಧಿನಾಯಕಿ ಸೋನಿಯಾ ಗಾಂಧಿಗೆ ಪತ್ರ ಬರೆದಿರುವ ಅವರು, ಪಕ್ಷದ ಎಲ್ಲಾ ಜವಾಬ್ದಾರಿ ಸೇರಿದಂತೆ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಜಮ್ಮು-ಕಾಶ್ಮೀರ ಕಾಂಗ್ರೆಸ್​ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಗುಲಾಂ ನಬಿ ರಾಜೀನಾಮೆ – ಒಂದೇ ಗಂಟೆಯಲ್ಲಿ ಸೆಡ್ಡು

ಗುಲಾಂ ಅಬಿ ಅಜಾದ್ (Ghulam Nabi Azad) ​​ ಜಮ್ಮು ಮತ್ತು ಕಾಶ್ಮೀರದ ಕಾಂಗ್ರೆಸ್​ ನಾಯಕರಾಗಿದ್ದಾರೆ. 2005 ರಿಂದ 2008 ರ ವರೆಗೆ ಆ ರಾಜ್ಯದ ಮುಖ್ಯಮಂತ್ರಿಗಳಾಗಿಯೂ ಸೇವೆ ಸಲ್ಲಿಸಿದ್ದಾರೆ. ಹಾಗೆಯೇ, ಮನ್​ಮೋಹನ್ ಸಿಂಗ್ ಸಂಪುಟದಲ್ಲಿ ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಇದೇ ತಿಂಗಳ 16 ರ ರಂದು ಗುಲಾಂ ಅಭಿ ಅಜಾದ್​​ ಅವರು ಜುಮ್ಮು ಮತ್ತು ಕಾಶ್ಮೀರದ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಗಂಟೆಯಲ್ಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಅಲ್ಲದೇ, ಜಮ್ಮು ಕಾಶ್ಮೀರ ಕಾಂಗ್ರೆಸ್​​ ವ್ಯವಹಾರಗಳ ಸಮಿತಿ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡಿದ್ದರು.

LEAVE A REPLY

Please enter your comment!
Please enter your name here