BREAKING: ಗುಜರಾತ್​ನಲ್ಲಿ ಹೊಸ ಬಿಜೆಪಿ ಸಿಎಂ ಆಯ್ಕೆ – ವೀಕ್ಷಕರಾಗಿ ಯಡಿಯೂರಪ್ಪ ನೇಮಕ

ಗುಜರಾತ್​ನಲ್ಲಿ ಹೊಸ ಮುಖ್ಯಮಂತ್ರಿ ಆಯ್ಕೆ ಸಂಬಂಧ ಬಿಜೆಪಿ ಸಂಸದೀಯ ಮಂಡಳಿ ಮೂವರು ವೀಕ್ಷಕರನ್ನು ನೇಮಿಸಿದೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಕೂಡಾ ಆ ಮೂವರು ವೀಕ್ಷಕರಲ್ಲಿ ಒಬ್ಬರು.

ರಕ್ಷಣಾ ಸಚಿವ ರಾಜ್​ನಾಥ್​ ಸಿಂಗ್​ ಮತ್ತು ಕೇಂದ್ರ ಸಚಿವ ಅರ್ಜುನ್​ ಮುಂಡಾ ಅವರನ್ನೂ ವೀಕ್ಷಕರನ್ನಾಗಿ ನೇಮಕ ಮಾಡಿದೆ.

ಗುಜರಾತ್​ಗೆ ತೆರಳಲಿರುವ ಮೂವರು ವೀಕ್ಷಕರು ಗುಜರಾತ್​ ಬಿಜೆಪಿ ಶಾಸಕರ ಸಭೆಯಲ್ಲಿ ಭಾಗವಹಿಸಿ ಬಿಜೆಪಿ ಶಾಸಕಾಂಗ ಪಕ್ಷದ ಹೊಸ ನಾಯಕರನ್ನು ಆಯ್ಕೆ ಮಾಡುವ ಪ್ರಕ್ರಿಯೆ ನೋಡಿಕೊಳ್ಳಲಿದ್ದಾರೆ.

ಮೂಲಗಳ ಪ್ರಕಾರ ಹಾಲಿ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್​ ಅವರನ್ನೇ ಮತ್ತೆ ಮುಖ್ಯಮಂತ್ರಿಯನ್ನಾಗಿ ಬಿಜೆಪಿ ಘೋಷಿಸುವ ನಿರೀಕ್ಷೆ ಇದೆ.

182 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ಬರೋಬ್ಬರೀ 156 ಸೀಟುಗಳನ್ನು ಗೆದ್ದುಕೊಂಡಿತ್ತು.