ಈ ವರ್ಷದ ಅಂತ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಐದು ರಾಜ್ಯಗಳಿಗೆ ಬಿಜೆಪಿ ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿದೆ.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ರಾಜಸ್ಥಾನದ ಚುನಾವಣಾ ಉಸ್ತುವಾರಿಯಾಗಿ ಮತ್ತು ನಿತಿನ್ ಪಟೇಲ್ ಹಾಗೂ ಕುಲದೀಪ್ ಬಿಷ್ಣೋಯಿ ಅವರನ್ನು ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.
ಭೂಪೇಂದ್ರ ಯಾದವ್ ಅವರನ್ನು ಮಧ್ಯಪ್ರದೇಶ ಚುನಾವಣಾ ಉಸ್ತುವಾರಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಸಹ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ.
ಪ್ರಕಾಶ್ ಜಾವ್ಡೇಕರ್ ಅವರನ್ನು ತೆಲಂಗಾಣ ಚುನಾವಣಾ ಉಸ್ತುವಾರಿಯನ್ನಾಗಿ ಮತ್ತು ಸುನಿಲ್ ಬನ್ಸಾಲ್ ಅವರನ್ನು ಸಹ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ.
ಓಂ ಮಾಥೂರ್ ಅವರನ್ನು ಛತ್ತೀಸ್ಗಢ ಚುನಾವಣಾ ಉಸ್ತುವಾರಿಯನ್ನಾಗಿ ಮತ್ತು ಮನ್ಸುಖ್ ಮಾಂಡವೀಯಾ ಅವರನ್ನು ಸಹ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ.
ADVERTISEMENT
ADVERTISEMENT