BJP ಶಾಸಕರ ದುವರ್ತನೆಗೆ ಮಾಜಿ ಸಿಎಂ H D ಕುಮಾರಸ್ವಾಮಿ ಸಮರ್ಥನೆ

ವಿಧಾನಸಭೆಯಲ್ಲಿ ಬಿಜೆಪಿ ಶಾಸಕರ ದುವರ್ತನೆಯನ್ನು ಸಮರ್ಥಿಸಿಕೊಂಡಿರುವ ಮಾಜಿ ಮುಖ್ಯಮಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಅವರು ಬಿಜೆಪಿ ಶಾಸಕರನ್ನು ಕಲಾಪದಿಂದ ಅಮಾನತು ಮಾಡಿರುವ ಸ್ಪೀಕರ್​ ಆದೇಶವನ್ನು ಖಂಡಿಸಿದ್ದಾರೆ.

ಒಂದು ದಿನದ ಹಿಂದೆ ‘ ಇಂಡಿಯಾ ‘ ಎಂದು ಬೆಂಗಳೂರಿನಲ್ಲಿ ಜಪ ಮಾಡಿದ್ದ @INCIndia 24 ಗಂಟೆ ಒಳಗಾಗಿ ಇದೇ ನಗರದಲ್ಲಿ ಇಂಡಿಯಾ ಎನ್ನುವ ಇಡಿಯಾದ ಆದರ್ಶ ಪರಿಕಲ್ಪನೆಗೆ ಎಳ್ಳುನೀರು ಬಿಟ್ಟಿದೆ. ಪ್ರಜಾಪ್ರಭುತ್ವದ ಮೇಲೆ ನಂಬಿಕೆಯೇ ಇಲ್ಲದ ಕಾಂಗ್ರೆಸ್, ಸಾಂವಿಧಾನಿಕ ಮೌಲ್ಯಗಳನ್ನು ಕಸಕ್ಕೆ ಸಮ ಎನ್ನುವಂತೆ ವರ್ತಿಸಿದೆ.

ಪ್ರತಿಪಕ್ಷಗಳು ಕೇಳುವ ಪ್ರಶ್ನೆಗಳನ್ನು ಸಮಾಧಾನದಿಂದ ಆಲಿಸಿ, ಉತ್ತರ ನೀಡುವುದು ನಾಗರಿಕ ಸರಕಾರದ ಕರ್ತವ್ಯ. ಆದರೆ, ಅನಾಗರಿಕತೆಯನ್ನೇ ಅರೆದು ಕುಡಿದಷ್ಟು, ಅನಾಗರಿಕತೆಯೇ ನಾಚಿ ನಿಟ್ಟುಸಿರು ಬಿಡುವಷ್ಟು ಹೀನಾಯವಾಗಿ ರಾಜ್ಯ ಕಾಂಗ್ರೆಸ್ ಸರಕಾರ ವರ್ತಿಸಿದೆ.

ಶತಮಾನಕ್ಕೂ ಹೆಚ್ಚಿನ ಇತಿಹಾಸ ನನ್ನದು ಎಂದು ಕೊಚ್ಚಿಕೊಳ್ಳುವ ಕಾಂಗ್ರೆಸ್ ಪ್ರಜಾಸತ್ತೆಗೆ ಶಾಪ. ಜನತಂತ್ರದ ಮೇಲೆ ದರ್ಪ ತೋರಿಸಿದ ಆ ಪಕ್ಷಕ್ಕೆ ತಿಳಿದಿರಲಿ. ಇಂಡಿಯಾ ಎಂದರೆ ಇದಲ್ಲವೇ ಅಲ್ಲ, ಇಂಡಿಯಾ ಎಂದರೆ ಪ್ರಜಾಪ್ರಭುತ್ವ. ಇಂಡಿಯಾ ಎಂದರೆ ಇವರಷ್ಟೇ ಅಲ್ಲ, ನಾವೆಲ್ಲರೂ

ಎಂದು ಹೇಳಿ ಡೆಪ್ಯೂಟಿ ಸ್ಪೀಕರ್​​ ಮುಖಕ್ಕೆ ಕಾಗದ ಎಸೆದ ಬಿಜೆಪಿ ಶಾಸಕರ ದುರ್ನಡತೆಯನ್ನು ಸಮರ್ಥಿಸಿಕೊಂಡಿದ್ದಾರೆ. 

LEAVE A REPLY

Please enter your comment!
Please enter your name here