ಕರ್ನಾಟಕ ಬಿಜೆಪಿ ಘಟಕವನ್ನು ಪುನರ್ ಸಂಘಟನೆ ಮಾಡಲಾಗಿದೆ. ಬಿ ವೈ ವಿಜಯೇಂದ್ರ ಅವರು ಪಕ್ಷದ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ಬಳಿಕ ಮಾಡಲಾದ ಪುನರ್ ಸಂಘಟನೆಯಲ್ಲಿ ಮಾಜಿ ಸಚಿವ ಸಿ ಟಿ ರವಿಗೆ ಸ್ಥಾನ ಸಿಕ್ಕಿಲ್ಲ.
9 ಮಂದಿ ರಾಜ್ಯ ಬಿಜೆಪಿ ಉಪಾಧ್ಯಕ್ಷರನ್ನು ನೇಮಕ ಮಾಡಲಾಗಿದೆ.
ಮುರುಗೇಶ್ ನಿರಾಣಿ, ಬೈರತಿ ಬಸವರಾಜ್, ರಾಜುಗೌಡ ನಾಯಕ್, ಎನ್ ಮಹೇಶ್, ಅನಿಲ್ ಬೆನಕೆ, ಹರತಾಳು ಹಾಲಪ್ಪ, ರೂಪಾಲಿ ಸಂತೀಷ್ ನಾಯಕ್, ಡಾ ಬಸವರಾಜ ಕೇಲಗಾರ, ಮಾಳವಿಕಾ ಅವಿನಾಶ್, ಎಂ ರಾಜೇಂದ್ರ
ರಾಜ್ಯ ಪ್ರಧಾನ ಕಾರ್ಯದರ್ಶಿಗಳು:
ವಿ ಸುನಿಲ್ ಕುಮಾರ್, ಪಿ ರಾಜೀವ್, ಎನ್ ಎಸ್ ನಂದೀಶ್ ರೆಡ್ಡಿ, ಜೆ ಪ್ರೀತಂಗೌಡ.
ರಾಜ್ಯ ಕಾರ್ಯದರ್ಶಿಗಳು:
ಶೈಲೇಂದ್ರ ಬೆಲ್ಲಾಳೆ, ಡಿ ಎಸ್ ಅರುಣ್, ಬಸವರಾಜ್ ಮತ್ತಿಮೋಡ್, ಸಿ ಮುನಿರಾಜು, ವಿನಯ್ ಬಿದರೆ, ಕ್ಯಾಪ್ಟನ್ ಬ್ರಿಜೇಶ್ ಚೌಟ, ಶರಣು ತಳ್ಳಿಕೇರಿ, ಲಲಿತಾ ಅನಾಪುರ, ಡಾ ಲಕ್ಷ್ಮೀ ಅಶ್ವಿನ್ ಗೌಡ, ಅಂಬಿಕಾ ಹುಲಿನಾಯ್ಕರ್
ರಾಜ್ಯ ಖಜಾಂಜಿಯಾಗಿ ಸುಬ್ಬನರಸಿಂಹ ಅವರನ್ನು ನೇಮಕ ಮಾಡಲಾಗಿದೆ.
ಬಿಜೆಪಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆಯಾಗಿ ಸಿ ಮಂಜುಳಾ ಅವರನ್ನು ನೇಮಿಸಲಾಗಿದೆ.
ಯುವ ಮೋರ್ಚಾದ ರಾಜ್ಯಾಧ್ಯಕ್ಷರಾಗಿ ಮೊದಲ ಬಾರಿಗೆ ಶಾಸಕರಾಗಿರುವ ಧೀರಜ್ ಮುನಿರಾಜು ಅವರನ್ನು ನೇಮಿಸಲಾಗಿದೆ.
ಎಸ್ ಟಿ ಮೋರ್ಚಾದ ರಾಜ್ಯಾಧ್ಯಕ್ಷರಾಗಿ ಬಂಗಾರು ಹನುಮಂತು, ಎಸ್ ಸಿ ಮೋರ್ಚಾ ರಾಜ್ಯಾಧ್ಯಕ್ಷರಾಗಿ ಮೊದಲ ಬಾರಿಗೆ ಶಾಸಕರಾಗಿರುವ ಸಿಮೆಂಟ್ ಮಂಜು, ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯಾಧ್ಯಕ್ಷರಾಗಿ ರಘು ಕೌಟಿಲ್ಯ, ರೈತ ಮೋರ್ಚಾದ ರಾಜ್ಯಾಧ್ಯಕ್ಷರಾಗಿ ಎ ಎಸ್ ಪಾಟೀಲ್ ನಡಹಳ್ಳಿ, ಅಲ್ಪಸಂಖ್ಯಾತ ಮೋರ್ಚಾದ ರಾಜ್ಯಾಧ್ಯಕ್ಷರಾಗಿ ಅನಿಲ್ ಥಾಮಸ್ ಅವರನ್ನು ನೇಮಿಸಲಾಗಿದೆ.