DCM ಡಿಕೆಶಿ ಭೇಟಿ ಆದ ರೇಣುಕಾಚಾರ್ಯ – BJP ನಾಯಕರಿಂದ ಹೆಚ್ಚಿದ DKS ಭೇಟಿ

ಮಾಜಿ ಸಚಿವ ಮತ್ತು ಮಾಜಿ ಶಾಸಕ ಎಂ ಪಿ ರೇಣುಕಾಚಾರ್ಯ ಅವರು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರನ್ನು ಭೇಟಿ ಆಗಿದ್ದಾರೆ.

ಬೆಂಗಳೂರಿನಲ್ಲಿ ಈ ಭೇಟಿ ನಡೆದಿದೆ.

ಹೊನ್ನಾಳಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ ಶಾಸಕ ಶಾಂತನಗೌಡ ವಿರುದ್ಧ ರೇಣುಕಾಚಾರ್ಯ 17 ಸಾವಿರಕ್ಕೂ ಅಧಿಕ ಮತಗಳಿಂದ ಸೋತಿದ್ದರು.

ಉಪ ಮುಖ್ಯಮಂತ್ರಿ ಡಿಕೆಶಿವಕುಮಾರ್​ ಅವರನ್ನು ಬಿಜೆಪಿ ನಾಯಕರು ಭೇಟಿ ಮಾಡುತ್ತಿರುವುದು ವಿಶೇಷ. ಬಿಜೆಪಿ ರಾಜ್ಯಸಭಾ ಸಂಸದ ಜಗ್ಗೇಶ್ ಅವರು​ ಪತ್ನಿ ಜೊತೆಗೆ ಡಿಕೆಶಿ ಅವರನ್ನು ಭೇಟಿಯಾಗಿದ್ದರು.  

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ ವೈ ರಾಘವೇಂದ್ರ ಅವರು ಕೂಡಾ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆಶಿವಕುಮಾರ್ ಅವರನ್ನು ಭೇಟಿಯಾಗಿದ್ದರು.