ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಆರು ಮಂದಿ ಹಾಲಿ ಶಾಸಕರಿಗೆ ಬಿಜೆಪಿ ಟಿಕೆಟ್ ನಿರಾಕರಿಸಬಹುದು ಎಂದು ಮೂಲಗಳು ತಿಳಿಸಿವೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಮೀಸಲು ವಿಧಾನಸಭಾ ಕ್ಷೇತ್ರದ ಶಾಸಕ ಎಂಪಿ ಕುಮಾರಸ್ವಾಮಿಗೆ ಅವರಿಗೆ ಈ ಬಾರಿ ಟಿಕೆಟ್ ನಿರಾಕರಿಸಬಹುದು.
ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್ ಎ ರವೀಂದ್ರನಾಥ್ ಅವರಿಗೆ ಬಿಜೆಪಿ ಈ ಬಾರಿ ಟಿಕೆಟ್ ನೀಡುವ ಸಾಧ್ಯತೆ ತುಂಬಾ ಕಡಿಮೆ ಇದೆ.
ಕೊಪ್ಪಳ ಜಿಲ್ಲೆಯ ಕನಕಗಿರಿ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ ದಡೇಸಗೂರು ಅವರಿಗೆ ಈ ಬಾರಿಗೆ ಬಿಜೆಪಿ ಟಿಕೆಟ್ ನಿರಾಕರಿಸಬಹುದು. ಪಿಎಸ್ಐ ನೇಮಕಾತಿ ಹಗರಣದಲ್ಲಿ ಆಡಿಯೋ ವೈರಲ್ ಒಳಗೊಂಡಂತೆ ಹಲವು ವಿವಾದಗಳಲ್ಲಿ ಡಡೇಸಗೂರು ಹೆಸರು ತಳುಕು ಹಾಕಿಕೊಂಡಿತ್ತು.
ವಯಸ್ಸಿನ ಕಾರಣದಿಂದ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರಿಗೆ ಮುಧೋಳ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಕೈ ತಪ್ಪುವ ನಿರೀಕ್ಷೆ ಇದೆ. ಕಾರಜೋಳ ಅವರಿಗೆ 72 ವರ್ಷ ವಯಸ್ಸು.
ಹಾವೇರಿ ಶಾಸಕ ನೆಹರು ಒಲೇಕಾರ್ ಅವರಿಗೂ ಬಿಜೆಪಿ ಟಿಕೆಟ್ ನೀಡುವ ಸಾಧ್ಯತೆ ತುಂಬಾ ಕಡಿಮೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿನಿಧಿಸುವ ಹಾವೇರಿ ಜಿಲ್ಲೆಯ ಈ ಪ್ರಮುಖ ಬಿಜೆಪಿ ಶಾಸಕ ಕಾಂಗ್ರೆಸ್ ಕಡೆ ಮುಖ ಮಾಡಬಹುದು ಎನ್ನಲಾಗ್ತಿದೆ.
ಅಚ್ಚರಿಯ ರೀತಿಯಲ್ಲಿ ಬೆಂಗಳೂರಿನ ಬಸವನಗುಡಿ ವಿಧಾನಸಭಾ ಕ್ಷೇತ್ರದಿಂದ ಹಾಲಿ ಶಾಸಕ ರವಿಸುಬ್ರಹ್ಮಣ್ಯ ಅವರಿಗೆ ಟಿಕೆಟ್ ನಿರಾಕರಿಸಬಹುದು.
ಭ್ರಷ್ಟಾಚಾರ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸುವುದು ಖಚಿತ.
ADVERTISEMENT
ADVERTISEMENT