ಹಾಸನ: ಅರಣ್ಯ ಪ್ರದೇಶದಲ್ಲಿ ಮರ ಕಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹ ಅವರಿಗೆ ಬೇಲೂರಿನ ಸೀನಿಯರ್ ಸಿವಿಲ್ ಜಡ್ಜ್ ಜಾಮೀನು ನೀಡಿ ಆದೇಶ ಹೊರಡಿಸಿದೆ.
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಂದಗೊಂಡನಹಳ್ಳಿಯ ಸರ್ಕಾರಿ ಜಮೀನಿನಲ್ಲಿದ್ದ 126 ಮರಗಳನ್ನು ಅಕ್ರಮವಾಗಿ ಕಡಿದು ಸಾಗಿಸಿರುವ ಪ್ರಕರಣಕ್ಕೆ ಸಂಬಂಧಿಸಿ ವಿಕ್ರಂ ಸಿಂಹ ಪರ ವಕೀಲ ಚಂದ್ರೇಗೌಡ, ಧರ್ಮೇಗೌಡ ಜಾಮೀನು ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಾಧೀಶರು ಜಾಮೀನು ಅರ್ಜಿ ಮಂಜೂರು ಮಾಡಿದ್ದಾರೆ.
ವಿಕ್ರಂ ಸಿಂಹ ಅವರನ್ನು ಭಾನುವಾರ ವೈದ್ಯಕೀಯ ತಪಾಸಣೆ ನಡೆಸಿ ಅಪರಾಹ್ನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು
.