ವಿಜಯಪುರ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿಯವರು ಕಾಂಗ್ರೆಸ್ ಪಕ್ಷವನ್ನು ಅವಾಚ್ಯವಾಗಿ ನಿಂದಿಸಿದ್ದಾರೆ.
ಚಿಕ್ಕೋಡಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಸಂಸದರ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಆರ್‌ಎಸ್‍ಎಸ್ ಸಂಘಟನೆಯಿಂದ ಜಿಗಜಿಣಗಿ ಅವರು ದೂರ ಇದ್ದೀರಾ ಎನ್ನುವ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ ಮಾತನಾಡಿದ ಅವರು, ನಾವು ಜನತಾ ಪರಿವಾರದ ಮುಖಂಡರ ಸಹವಾಸದಿಂದ ಬೆಳೆದಿದ್ದೇವೆ. ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ನಿಧನದ ನಂತರ ಕಾಂಗ್ರೆಸ್ ಪಕ್ಷಕ್ಕೆ ಬಾ ಎಂದು ಕರೆದಿದ್ದರು ಎಂದರು.
ಕಾಂಗ್ರೆಸ್‍ನವರು ಸೂ.. ಮಕ್ಕಳಾ ಮನೆ ಹಾಳ ಮಾಡಿದ್ದೀರಾ. ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಕೊಲೆ ಮಾಡಿದ್ದಾರೆ. ಅವರ ಮರಣದ ನಂತರ ದೆಹಲಿಯಲ್ಲಿ ಮಣ್ಣು ಮಾಡಲು ಸ್ಥಳವನ್ನು ನೀಡಲಿಲ್ಲ. ನಿಮ್ಮಂಥ ಮನೆಹಾಳ ಪಕ್ಷ ಸೇರುವುದಿಲ್ಲ. ಏನೇ ಆಗಲಿ ಎಂದು ವಿರೋಧದ ನಡುವೆಯೂ ಬಿಜೆಪಿ ಸೇರಿದ್ದೇನೆ. ಜನತಾದಳದವನಾಗಿದ್ದರೂ ಸಂಘ ಪರಿವಾರ ಹಾಗೂ ಬಿಜೆಪಿಯ ಬಗ್ಗೆ ಗೌರವ ಇದೆ ಎಂದು ತಿಳಿಸಿದರು.