ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಘೋಷಣೆಯಾದ ಬಳಿಕ ಬಿಜೆಪಿ ಪಕ್ಷದ ಒಕ್ಕಲಿಗ ನಾಯಕರೆಲ್ಲ ಈಗ ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮನೆಗೆ ಸರದಿ ಭೇಟಿ ಕೊಡುತ್ತಿದ್ದಾರೆ.
ಇವತ್ತು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಮಾಜಿ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಅವರು ದೇವೇಗೌಡರು ಮತ್ತು ಕುಮಾರಸ್ವಾಮಿ ಇಬ್ಬರನ್ನೂ ಭೇಟಿಯಾಗಿ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮಾತುಕತೆ ನಡೆಸಿದ್ದಾರೆ.
ಬಚ್ಚೇಗೌಡ ಅವರಿಗೆ ಬಿಜೆಪಿ ಈ ಬಾರಿ ಟಿಕೆಟ್ ನೀಡುತ್ತಿಲ್ಲವಾದ ಕಾರಣ ಸುಧಾಕರ್ ಅವರು ಈ ಬಾರಿ ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಜೆಡಿಎಸ್ಗೆ ಅದರದ್ದೇ ಆದ ಮತಗಳಿವೆ.
ADVERTISEMENT
2019ರಲ್ಲಿ ಚಿಕ್ಕಬಳ್ಳಾಪುರದಲ್ಲಿ ಮೈತ್ರಿ ಅಭ್ಯರ್ಥಿಯಾಗಿದ್ದ ಮಾಜಿ ಕೆಂದ್ರ ಸಚಿವ ವೀರಪ್ಪ ಮೊಯ್ಲಿ ಅವರು 1 ಲಕ್ಷದ 82 ಸಾವಿರ ಮತಗಳಿಂದ ಸೋತಿದ್ದರು. 2014ರಲ್ಲಿ ಕುಮಾರಸ್ವಾಮಿ ಅವರು 3 ಲಕ್ಷದ 46 ಸಾವಿರ, ಸಿ ಆರ್ ಮನೋಹರ್ ಅವರು 1 ಲಕ್ಷದ 86 ಸಾವಿರ ಮತಗಳನ್ನು ಪಡೆದಿದ್ದರು.
ಒಂದು ವೇಳೆ ಈ ಕ್ಷೇತ್ರವನ್ನು ಬಿಜೆಪಿಯೇ ಉಳಿಸಿಕೊಂಡರೆ ಬಿಜೆಪಿಯಿಂದಲೇ ಟಿಕೆಟ್ ಪಡೆಯುವ ಸಲುವಾಗಿ ದೇವೇಗೌಡರು ಮತ್ತು ಕುಮಾರಸ್ವಾಮಿ ಮೂಲಕ ಸುಧಾಕರ್ ಲಾಬಿ ತೀವ್ರಗೊಳಿಸಿದ್ದಾರೆ.
ADVERTISEMENT